ಬೆಂಗಳೂರು ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ idol smuggling saaksha tv
ದೇವನಹಳ್ಳಿ : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಇಂದು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ.
ಬೆಂಗಳೂರಿನಿಂದ ಜಪಾನ್ ಗೆ ಪುರಾತನ ಕಾಲದ ಕಲ್ಲಿನ ವಿಗ್ರಹಗಳನ್ನು ಸಾಗಣೆ ಮಾಡುವ ಪ್ರಯತ್ನವನ್ನು ವಿಫಲಗೊಳಿಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ.
ದೆಹಲಿ ಮೂಲದ ರಫ್ತುದಾರ ಮಹಾ ವಿಷ್ಣುವಿನ ಪುರಾತನ ವಿಗ್ರಹವನ್ನು ಜಪಾನ್ ಗೆ ಅಕ್ರಮ ಸಾಗಣೆ ಮಾಡಲು ಯತ್ನಿಸುತ್ತಿದ್ದ. ಇದನ್ನು ತಿಳಿದ ಅಧಿಕಾರಿಗಳು, ಪುರಾತನ ಕಲಾ ಸಂಪತ್ತು ಸಾಗಣೆ ನಿಷೇಧ ಖಾಯ್ದೆಯಡಿ ವಿಗ್ರಹ ವಶ ಪಡಿಸಿಕೊಂಡಿದ್ದಾರೆ. ಹಾಗೇ ವಿಗ್ರಹ ರಫ್ತು ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿ, ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ಮತ್ತೊಂದು ಕಡೆ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಗೋಲ್ಡ್ ಬಿಸ್ಕೆಟ್ ಗಳನ್ನು ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ ಬಾಯಿಯೊಳಗೆ ಚಿನ್ನದ ತುಣುಕುಗಳನ್ನು ಇಟ್ಟುಕೊಂಡು ಬಂದಿದ್ದ ಪ್ರಯಾಣಿಕನನ್ನು ಮತ್ತೊಂದು ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ.