ಲಕ್ನೋ: ಸೂಟ್ ಕೇಸ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆಯೊಂದು ನಡೆದಿದೆ.
ಉತ್ತರಪ್ರದೇಶದ (Uttar Pradesh) ಗಾಜಿಯಾಬಾದ್ (ghaziabad) ನಲ್ಲಿ ಈ ಘಟನೆ ನಡೆದಿದೆ. ಗಾಜಿಯಾಬಾದ್‌ನ ಲೋನಿ ಗಡಿ ಪ್ರದೇಶದ ಕಾಲುವೆಯಲ್ಲಿ ಕಂಡು ಬಂದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಕಾಲುಗಳನ್ನು ಅಡ್ಡಲಾಗಿ ಇರಿಸಲಾಗಿದ್ದು, ಕೈ ಹಾಗೂ ತಲೆಯನ್ನು ಮೂಲೆಯಲ್ಲಿ ಇರಿಲಾಗಿದೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.








