ಮಡಿಕೇರಿ : ಒಮಿಕ್ರಾನ್ ಸೋಂಕು ರಾಜ್ಯದ ಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ. ಕೊರೊನಾ ಸೋಂಕಿಗಿಂತಲೂ ಒಮಿಕ್ರಾನ್ ವೇಗವಾಗಿ ಹರಡುವುದರಿಂದ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಅದರಂತೆ ಕೊಡಗು ಜಿಲ್ಲೆಯ ಗಡಿಭಾಗಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. Omicron Anxiety saaksha tv
ಜಿಲ್ಲೆಯ ಶಾಲೆಯೊಂದರಲ್ಲಿ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಕೂಡ ಜೋರಾಗಿದೆ. ಹೀಗಾಗಿ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಇತ್ತ ಜಿಲ್ಲೆಯ ಜನತೆ ಹೆಚ್ಚಾಗಿ ನೆರೆಯ ಕೇರಳ ರಾಜ್ಯದೊಂದಿದೆ ಹೆಚ್ಚಿನ ವ್ಯವಹಾರ ನಡೆಸುತ್ತಾರೆ. ಜತೆಗೆ ಕೇರಳದಿಂದ ಕೊಡಗಿಗೆ ಸಾಕಷ್ಟು ಮಂದಿ ಆಗಮಿಸುತ್ತಾರೆ. ಹಾಗಾಗಿ, ಕೊಡಗಿನ 3 ಗಡಿಯಲ್ಲಿ ಹೈಅಲರ್ಟ್ ಮಾಡಲಾಗಿದೆ.