ಒಮಿಕ್ರಾನ್ ಆತಂಕ : ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ..?
ರಾಜ್ಯದಲ್ಲಿ ಒಮ್ರಿಕಾನ್ ಸೋಂಕಿನ ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮಗಳ ಜಾರಿಗೆ ಮುಂದಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದೇಶಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚುತ್ತಿದೆ.
ಈ ನಡುವೆ ಕೊರೊನಾ ಆತಂಕ ಕೂಡ ಮನೆ ಮಾಡಿದೆ. ಇಂತಹ ಸಂದರ್ಭದಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡಲು ಸಾಧ್ಯವೇ ಇಲ್ಲ.
ಈಗಾಗಲೇ ಕೆಲ ನಿರ್ಬಂಧಗಳನ್ನು ವಿಧಿಸಲಾಗಿದೆ. ಇನ್ನಷ್ಟು ಖಡಕ್ ರೂಲ್ಸ್ ಬಗ್ಗೆ ನಾಳೆ ನಿರ್ಧರಿಸಲಾಗುವುದು ಎಂದರು.
ನೆರೆ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದಲ್ಲೂ ಕಟ್ಟುನಿಟ್ಟಿನ ನಿಯಮಗಳ ಅನಿವಾರ್ಯತೆ ಇದೆ.
ಒಮಿಕ್ರಾನ್ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ಕೂಡ ಬಂದಿದೆ.
ಈ ನಿಟ್ಟಿನಲ್ಲಿ ಗೈಡ್ ಲೈನ್ ಗೆ ಅನುಗುಣವಾಗಿ ರಾಜ್ಯದಲ್ಲಿ ಕೆಲ ಮಾರ್ಗಸೂಚಿ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.









