ರಾಜ್ಯದಲ್ಲಿ ಓಮಿಕ್ರಾನ್ ಅಬ್ಬರ : ಒಂದೇ ದಿನ 149 ಕೇಸ್ ಪತ್ತೆ omicron-cases-update saaksha tv
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಜೊತೆ ಜೊತೆಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿನ ಅಬ್ಬರ ಜೋರಾಗಿದೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಟ್ಟು 149 ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಓಮಿಕ್ರಾನ್ ಸೋಂಕಿನ ಪ್ರಕರಣಗಳ ಸಂಖ್ಯೆ 226ಕ್ಕೇ ಏರಿಕೆಯಾಗಿದೆ.
ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ. ಇನ್ನು ರಾಜ್ಯದಲ್ಲಿ ಈ ಒಮಿಕ್ರಾನ್ ಸೋಂಕು ಐದು ಪಟ್ಟು ವೇಗವಾಗಿ ಹಬ್ಬುತ್ತಿದೆ.
ಇತ್ತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ನಾಳೆಯಿಂದ ಜಾರಿಗೆ ಬರುವಂತೆ ಒಂದಿಷ್ಟು ಕ್ರಮಗಳನ್ನು ಜಾರಿ ಮಾಡಿದೆ.
ನಾಳೆಯಿಂದ ಹಾಫ್ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಶನಿವಾರ ಮತ್ತು ಭಾನುವಾರ ವಿಕೇಂಡ್ ಲಾಕ್ ಡೌನ್ ಜಾರಿ ಬರಲಿದೆ.









