ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿ, 21 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕಾನ್ಸಾಸ್ ಸಿಟಿಯಲ್ಲಿ ನಡೆದ ಸೂಪರ್ ಬೌಲ್ ವಿಕ್ಟರಿ ರ್ಯಾಲಿ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಲಿಸಾನ ಲೋಪೆಜ್ ಗಾಲ್ವಾನ್ ಬಲಿಯಾಗಿದ್ದಾರೆ ಎನ್ನಲಾಗಿದೆ. 12 ಮಕ್ಕಳು ಹಾಗೂ 11 ಜನರಿಗೆ ಗುಂಡು ತಗುಲಿದ್ದು, ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಜನರು ಓಡೋಡಿ ಹೋಗಿದ್ದಾರೆ. ಅಮೆರಿಕದಲ್ಲಿ ಗುಂಡಿನ ದಾಳಿಗಳು ವಿಪರೀತವಾಗುತ್ತಿದ್ದು, ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.








