ಏಪ್ರಿಲ್ ಒಂದರಿಂದ ಪಡಿತರ ಚೀಟಿದಾರರಿಗೆ ಒಂದು ಕೆಜಿ ಅಕ್ಕಿ ಉಚಿತ Saaksha Tv
ಬೆಂಗಳೂರು: ಏಪ್ರಿಲ್ ಒಂದರಿಂದ ರಾಜ್ಯದ ಎಲ್ಲ ಪಡಿತರ ಚೀಟಿದಾರರಿಗೆ ಒಂದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ಸರ್ಕಾರ ಘೋಷಿಸಿದೆ ಎಂದು ರಾಜ್ಯಪಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಇಂದಿನಿಂದ ಫೆಬ್ರವರಿ 14 ರಿಂದ 25ರವರೆಗೆ ಅಧಿವೇಶನ ನಡೆಯಲಿದೆ. ಇಂದು ಬೆಳಿಗ್ಗೆ ಪ್ರಾರಂಭವಾದ ಅಧಿವೇನಕ್ಕೆ ಬೆಳಗ್ಗೆ 11 ಗಂಟೆಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಉಭಯ ಸದನಗಳನ್ನು ಉದ್ದೇಶಿಸಿ ಮೊದಲು ಕನ್ನಡದಲ್ಲಿ ಭಾಷಣ ಪ್ರಾರಂಭಿಸಿ ನಂತರ ಹಿಂದಿಯಲ್ಲಿ ಭಾಷಣ ಮಾಡಿ ಅಧಿವೇಶನಕ್ಕೆ ಚಾಲನೆ ನೀಡಿದರು.
ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್ ಒಂದರಿಂದ ರಾಜ್ಯದ ಎಲ್ಲ ಪಡಿತರ ಚೀಟಿದಾರರಿಗೆ ಒಂದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ಸರ್ಕಾರ ಘೋಷಿಸಿದೆ. ಆದ್ಯತಾ ಪಡಿತರ ಚೀಟಿಯನ್ನು ಹೊಂದಿದ ಪ್ರತಿ ಕುಟುಂಬಕ್ಕೆ 5 ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದೆ. ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಆದೇಶಿಸಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದರು.
ಅಲ್ಲದೇ ಸರ್ಕಾರವು ಸುಸ್ಥಿರ ಕೃಷಿ ಕಾರ್ಯಕ್ರಮವನ್ನು ಜಾರಿಗೊಳಿಸಲು, ಪ್ರಾಥಮಿಕ ಕೃಷಿ ಉತ್ಪನ್ನಗಳ ಗರಿಷ್ಠ ಬಳಕೆಯ ಮೂಲಕ ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಮಾನವ ಸಂಪನ್ಮೂಲ ಮತ್ತು ಮೌಲ್ಯಾಧಾರಿತ ಕೌಶಲ್ಯವನ್ನು ಹೆಚ್ಚಿಸುವ ಸಲುವಾಗಿ ದ್ವಿತೀಯ ಕೃಷಿ ನಿರ್ದೇಶನಾಲಯವನ್ನು ಸೃಜಿಸಿದೆ.
ರಾಜ್ಯದಲ್ಲಿ ನೀರಾವರಿ ಕ್ರಾಂತಿ ಮಾಡಲು 1500 ಕೋಟಿ ರೂ. ವೆಚ್ಚದಲ್ಲಿ 55 ಅಣೆಕಟ್ಟುಗಳನ್ನು ಪುನಶ್ವೇತನಗೊಳಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯದ ಎಲ್ಲ ಗ್ರಾಮಗಳ ಜನರಿಗೆ ನಲ್ಲಿ ನೀರು ಒದಗಿಸುವುದಾಗಿ ಘೋಷಿಸಿದೆ ಎಂದು ತಿಳಿಸಿದರು.