ಕೊಪ್ಪಳದಲ್ಲಿ ಮಾರಕ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಕಾರಟಗಿಯಲ್ಲಿ ೫೩ ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಹೆಮ್ಮಾರಿಯಿಂದ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮಹಾಮಾರಿಗೆ ಬಲಿಯಾದರ ಸಂಖ್ಯೆ ೧೦ಕ್ಕೆ ಏರಿಕೆಯಾಗಿದ್ದು, ಕೊಪ್ಪಳದ ಜನರನ್ನು ಮತ್ತಷ್ಟು ಆತಂಕ್ಕೆ ದೂಡಿದೆ. ಜುಲೈ. ೧೨ರಂದೇ ಇವರಿಗೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ಆದ್ರೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಇನ್ನೂ ಜಿಲ್ಲೆಯಲ್ಲಿ ಇಲ್ಲಿವರೆಗೂ ಸೋಂಕಿತರ ಸಂಖ್ಯೆ ೪೩೧ರ ಗಡಿ ದಾಟಿದ್ದು, ೧೦ ಮಂದಿ ಬಲಿಯಾಗಿದ್ದಾರೆ. ಗುಣಮುಖರ ಸಂಖ್ಯೆಯಲ್ಲೂ ಗಣನೀಯವಾಗಿ ಏರಿಕೆಯಾಗಿದ್ದು, ಇಲ್ಲಿಯವರೆಗೂ ಸಂಪೂರ್ಣವಾಗಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿ ಮನೆಗೆ ವಾಪಸ್ಸಾದವರ ಸಂಖ್ಯೆ ೨೪೮ಕ್ಕೆ ಏರಿಕೆಯಾಗಿದೆ.
ಬಿಜೆಪಿಯಲ್ಲಿ ಬಿರುಕು: ಅತೃಪ್ತ ನಾಯಕರ ‘ಬಣ’ ಕದನ
ಕರ್ನಾಟಕದ ಬಿಜೆಪಿ ಘಟಕದಲ್ಲಿ ಬಣ ರಾಜಕೀಯ ಮತ್ತೆ ಮುಂದುವರೆದಿದೆ. ಪಕ್ಷದೊಳಗಿನ ಅತೃಪ್ತ ನಾಯಕರು ಮಾಜಿ ಸಚಿವ ಕುಮಾರ್ ಬಂಗಾರಪ್ಪನವರ ನಿವಾಸದಲ್ಲಿ ಸಭೆ ಸೇರಿದ್ದು, ಈ ಸಭೆ ಹಲವು...