ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿಗೆ ಇಂದು ಕೂಡ ಓರ್ವ ವ್ಯಕ್ತಿ ಬಲಿಯಾಗಿದ್ದು, ಇಂದು 103 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಬೆಂಗಳೂರಿನಲ್ಲಿಯೇ 80 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಮೈಸೂರಿನಲ್ಲಿ(Mysore)ಓರ್ವ ಸೋಂಕಿತ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 479 ಆಗಿವೆ. ಈ ಪೈಕಿ ಬೆಂಗಳೂರಿನಲ್ಲಿಯೇ 380 ಕೇಸ್ಗಳಿವೆ.
ಇಂದು ಬೆಂಗಳೂರು ನಗರ 80, ಮಂಡ್ಯ 8, ಬಳ್ಳಾರಿ 3, ಮೈಸೂರು 3, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗದಲ್ಲಿ 2, ಬೀದರ್, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ 1 ಪ್ರಕರಣ ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.