ಕೊಡಗಿನಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ : ಡಿಸಿ ಸುಳಿವು lockdown
ಮಡಿಕೇರಿ : ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಹಾವು ಏಣಿ ಆಟವಾಡುತ್ತಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸಂಪೂರ್ಣವಾಗಿ ಕಡಿಮೆ ಆಗುವವರೆಗೂ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಜಿಲ್ಲಾಧಿಕಾರಿಗಳು ಸುಳಿವು ನೀಡಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಒಂದು ವಾರದ ಪಾಸಿಟಿವ್ ರೇಟ್ ನೋಡಿದರೆ ಶೇ.6.5 ಇದೆ.
ಎರಡು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಟೆಸ್ಟಿಂಗ್ ಪ್ರಮಾಣ ಹೆಚ್ಚು ಮಾಡಿರುವುದರಿಂದ ಸೋಂಕಿತರ ಪ್ರಮಾಣದಲ್ಲಿ ಏರುಪೇರು ಅಗುತ್ತಿದೆ.
ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಆಂತರಿಕವಾಗಿ ಚರ್ಚಿಸಿರುವಂತೆ ಲಾಕ್ ಡೌನ್ ಮುಂದುವರಿಸುತ್ತೇವೆ ಎಂದು ಸುಳಿವು ನೀಡಿದ್ದಾರೆ.
ಇತ್ತ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗುವವರೆಗೂ ಅನ್‍ಲಾಕ್ ಮಾಡುವುದು ಬೇಡ ಎಂದು ಕೊಡಗಿನ ಇಬ್ಬರು ಶಾಸಕರು ಹೇಳಿದ್ದಾರೆ.