ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ lockdown
ನವದೆಹಲಿ : ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿದ್ದಾರೆ.
ಲಾಕ್ ಡೌನ್ ವಿಸ್ತರಣೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ.
ಆದರೂ ಇನ್ನೂ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತಿದೆ.
ಮೇ 31ರ ಬೆಳಿಗ್ಗೆವರೆಗೂ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಇಂದು 1,600 ಜನರಲ್ಲಿ ಮಾತ್ರ ಹೊಸದಾಗಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ.
ಸೋಂಕಿತರ ಸಂಖ್ಯೆ ಸಂಪೂರ್ಣ ಇಳಿಮುಖವಾಗಿದ್ದರೆ ಮೇ 31ರ ಬಳಿಕ ಅನ್ ಲಾಕ್ ಮಾಡಲಾಗುತ್ತದೆ ಎಂದು ತಿಳಿಸಿದರು.










