ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯಗೊಂಡಿದೆ. ಸಭೆಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ. ಮೊದಲನೆಯದಾಗಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯದ ಶಾಸಕರು, ಸಚಿವರು ವೇತನದಲ್ಲಿ ಶೇ. 30 ರಷ್ಟು ಕಡಿತ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಜೊತೆಗೆ ಕುಡಿಯುವ ನೀರಿಗಾಗಿ 49 ಬರಪೀಡಿತ ತಾಲೂಕುಗಳಿಗೆ ತಲಾ 1 ಕೋಟಿ ಹಾಗೂ ಗ್ರಾಮೀಣ ಪಟ್ಟಣ ಪಂಚಾಯಿತಿಗಳಿಗೆ 50 ಲಕ್ಷ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು. ಅಲ್ಲದೆ ಜಿಎಸ್ಟಿ ಪಾವತಿ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಸಂಕಷ್ಟದಲ್ಲಿರುವ ಹೂವು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಸಂಬಂಧ ಸಮೀಕ್ಷೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಮಾಧುಸ್ವಾಮಿ ಅವರು ತಿಳಿಸಿದ್ದಾರೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








