B.ed course | ಎರಡು ವರ್ಷದ ಬಿ.ಇಡಿ ಕೋರ್ಸಿಗೆ ದಾಖಲಾತಿ ಅಧಿಸೂಚನೆ ಪ್ರಕಟ
ಬೆಂಗಳೂರು : 2022 – 23 ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷಗಳ ಬಿ.ಇಡ್ ಕೋರ್ಸಿನ ಪ್ರವೇಶಾತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನೋಟಿಫಿಕೇಶನ್ ಪ್ರಕಟಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆಯ ಅಧಿಸೂಚನೆಯಲ್ಲಿ 2022 – 23 ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಿಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 31 – 11 -2022.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕಾಲೇಜು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ https://www.schooleducation.kar.nic.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅದಕ್ಕೂ ಮುನ್ನ ಅಭ್ಯರ್ಥಿಗಳು ಕಡ್ಡಾಯವಾಗಿ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಸೂಚನೆಗಳನ್ನು ಓದಿಕೊಳ್ಳಬೇಕು.