ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ನಮ್ಮ ಪಕ್ಷದಿಂದ ಕೇವಲ ಒಬ್ಬ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಜೂನ್8ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಯಾವುದೇ ಕಾರ್ಯಕರ್ತರು ಈ ವೇಳೆ ಆಗಮಿಸಬಾರದು. ಅವರು ಗೆದ್ದ ಬಳಿಕ ಅವರ ಮನೆಗೆ ಹೋಗಿ ಅಭಿನಂದನೆ ಸಲ್ಲಿಸಿ. ನಾಮಪತ್ರ ಸಲ್ಲಿಕೆ ವೇಳೆ ಹೆಚ್ಚು ಜನ ಜಮಾಯಿಸಿ ಸಾಮಾಜಿಕ ಅಂತರ ಕಾಪಾಡಲಿಲ್ಲ ಅಂತಾ ಆರೋಪ ಬರುವಂತೆ ಮಾಡಿ ಅವರ ಹಿರಿತನಕ್ಕೆ ಅಗೌರವ ತರುವುದು ಬೇಡ. ದೂರದಿಂದಲೇ ನಿಮ್ಮ ಪ್ರೀತಿ, ಅಭಿಮಾನ ತೋರಿಸಿ ಎಂದು ಮನವಿ ಮಾಡುತ್ತೇನೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದ ಮತಗಳನ್ನು ಯಾರಿಗೆ ಹಾಕಬೇಕು ಎಂಬುದನ್ನು ನಮ್ಮ ಹೈಕಮಾಂಡ್ ನ ನಾಯಕರು ಸೂಚನೆ ನೀಡಲಿದ್ದಾರೆ.ಅದನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಜೆಡಿಎಸ್ ನಿಂದ ಹೆಚ್.ಡಿ.ದೇವೇಗೌಡರು ಸ್ಪರ್ಧೆ ಮಾಡಿದರೇ ಕಾಂಗ್ರೆಸ್ ಅಥವಾ ಬಿಜೆಪಿಯಿಂದ ಬೆಂಬಲ ಬೇಕೆ ಬೇಕಾಗಿದೆ. ಒಂದು ವೇಳೆ ಬೆಂಬಲ ಸಿಗುವುದಿಲ್ಲ ಎಂದಾದರೆ ಮತ್ತಷ್ಟು ರಾಜಕೀಯ ಬಿಕ್ಕಟ್ಟು ರಾಜ್ಯಸಭೆ ಚುನಾವಣೆಯಲ್ಲಿ ನಡೆಯಲಿದೆ.








