ಕೆಲ ರಾಜ್ಯಗಳನ್ನು ಮಾತ್ರ ಲಾಕ್‌ಡೌನ್ ಮಾಡಿರುವುದಕ್ಕೆ ರಾಹುಲ್ ಗಾಂಧಿ ಗರಂ- ಸಂಪೂರ್ಣ ಲಾಕ್‌ಡೌನ್ ಗೆ ಆಗ್ರಹ

1 min read
full lockdown - Rahul Gandhi

ಕೆಲ ರಾಜ್ಯಗಳನ್ನು ಮಾತ್ರ ಲಾಕ್‌ಡೌನ್ ಮಾಡಿರುವುದಕ್ಕೆ ರಾಹುಲ್ ಗಾಂಧಿ ಗರಂ- ಸಂಪೂರ್ಣ ಲಾಕ್‌ಡೌನ್ ಗೆ ಆಗ್ರಹ

ಕಳೆದ ವರ್ಷ ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರಿದ್ದ ಕೇಂದ್ರ ಸರ್ಕಾರ ನಿರ್ಧಾರವನ್ನು ತರಾಟೆಗೆ ತೆಗೆದುಕೊಂಡಿದ್ದ ರಾಹುಲ್‌ ಗಾಂಧಿ ಈ ಬಾರಿ ಕೆಲ ರಾಜ್ಯಗಳನ್ನು ಮಾತ್ರ ಲಾಕ್‌ಡೌನ್‌ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶವನ್ನು ಸಂಪೂರ್ಣ ಲಾಕ್‌ಡೌನ್‌ ಮಾಡಿ ಎಂದು ಒತ್ತಾಯಿಸಿದ್ದಾರೆ.

ಭಾರತದಲ್ಲಿ ಕೋವಿಡ್ -19 ಸಾಂಕ್ರಾಮಿಕವನ್ನು ನಿಭಾಯಿಸಲು ಕೇಂದ್ರ ಸರ್ಕಾರ ಈವರೆಗೆ ಕೈಗೊಂಡಿರುವ ಕ್ರಮಗಳಿಂದ ಸಾಧ್ಯವಾಗುವುದಿಲ್ಲ. ದೇಶವನ್ನು ಸಂಪೂರ್ಣ ಲಾಕ್‌ಡೌನ್‌ ಮಾಡಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸರ್ಕಾರವು ನಿಷ್ಕ್ರಿಯತೆಯಿಂದ ಜನರ ಪ್ರಾಣಹಾನಿಗೆ ಕಾರಣವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
full lockdown - Rahul Gandhi

ಕೊರೋನಾದ ಹರಡುವಿಕೆಯನ್ನು ತಡೆಯುವ ಏಕೈಕ ಮಾರ್ಗವೆಂದರೆ ಸಂಪೂರ್ಣ ಲಾಕ್‌ಡೌನ್. ದುರ್ಬಲ ವರ್ಗಗಳಿಗೆ NYAY ಯ ರಕ್ಷಣೆಯೊಂದಿಗೆ ದೇಶದಲ್ಲಿ ಲಾಕ್ ಡೌನ್ ಹೇರಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಸರ್ಕಾರದ ನಿಷ್ಕ್ರಿಯತೆಯು ಅನೇಕ ಮುಗ್ಧ ಜನರನ್ನು ಕೊಲ್ಲುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಸರ್ಕಾರವು ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ನ್ಯಾಯ್(NYAY) ಯೋಜನೆಯನ್ನು ಜಾರಿಗೆ ತರಬೇಕು. ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ದೋಷಪೂರಿತ ಜಿಎಸ್ಟಿ ಅನುಷ್ಠಾನ ಮತ್ತು ಈಗ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕುಸಿದ ಭಾರತದ ಆರ್ಥಿಕತೆಯನ್ನು ಉನ್ನತೀಕರಿಸುವ ಏಕೈಕ ಮಾರ್ಗ ಇದಾಗಿದೆ ಎಂದು ಕಾಂಗ್ರೆಸ್ ಮುಖಂಡ ಹೇಳಿದ್ದಾರೆ.
ಕೊರೋನಾ ಮೊದಲನೆಯ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಲಾಕ್ ಡೌನ್ ಹೇರಿ ಕೇಂದ್ರ ಸರ್ಕಾರ ಅಮಾಯಕರ ಬದುಕನ್ನು ಬೀದಿಗೆ ತಂದಿದೆ ಎಂದು ಆರೋಪಿಸಿದ್ದರು.
wearing masks
ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ

#stop #spreadCorona now is #fulllockdown #Rahul Gandhi

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd