ಯುಜಿ, ಪಿಜಿ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಎಕ್ಸಾಂ
ಭೋಪಾಲ್ : ದೇಶದಲ್ಲಿ ಕೊರೊನಾ ಎರಡನೇ ಅಲೆ ಯಾರು ಊಹಿಸದ ರೀತಿಯಲ್ಲಿ ತನ್ನ ಕಬಂದ ಬಾಹುಗಳನ್ನು ವಿಸ್ತರಿಸುತ್ತಾ ಸಾಗಿದೆ.
ಅದರಂತೆ ಮಧ್ಯಪ್ರದೇಶದಲ್ಲೂ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಈ ಹಿನ್ನೆಲೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಪದವಿ ಪೂರ್ವ ಹಾಗೂ ಸ್ನಾತಕೋತ್ತರ ಪದವಿಗಳನ್ನು ವ್ಯಾಸಂಗ ಮಾಡುತ್ತಿರುವ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಪರೀಕ್ಷೆ ನೀಡಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.
ಓಪನ್ ಬುಕ್ ಪರೀಕ್ಷೆ ನಡೆಸುವ ಬಗ್ಗೆ ಮಧ್ಯಪ್ರದೇಶದ ಶಿಕ್ಷಣ ಸಚಿವ ಮೋಹನ್ ಯಾದವ್, ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಈ ಬಾರಿ ಕಾಲೇಜು ಹಾಗೂ ವಿಶ್ವ ವಿದ್ಯಾಲಯದಲ್ಲಿ ಯಾವುದೇ ರೀತಿಯ ದೈಹಿಕ ಪರೀಕ್ಷೆಗಳು ಇರುವುದಿಲ್ಲ.
ಯುಜಿ ಹಾಗೂ ಪಿಜಿ ಅಂತಿಮ ವರ್ಷದ ವಿದ್ಯಾರ್ಥಿಗಳು ಓಪನ್ ಬುಕ್ ಪರೀಕ್ಷೆಗಳು ನಡೆಸಲಾಗುತ್ತದೆ. ಆದರೆ ಕಾಲೇಜಿನಲ್ಲಿ ಯಾವುದೇ ಪರೀಕ್ಷೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.









