ಐ.ಡಿ.ಎಸ್.ಎಮ್.ಟಿ ಯೋಜನೆಯಡಿ ನಿರ್ಮಿಸಿರುವ ನೂತನ ಅಂಗಡಿ ಮಳಿಗೆಗಳ ಉದ್ಘಾಟನೆ chikkaballapura dr k sudakar saaksha tv
ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ರವರು ಇಂದು (ಗುರುವಾರ) ನಗರಸಭಾ ವ್ಯಾಪ್ತಿಯ ಕೃಷ್ಣಾ ಟಾಕೀಸ್ ಮುಂಭಾಗದಲ್ಲಿ ಐ.ಡಿ.ಎಸ್.ಎಮ್.ಟಿ ಯೋಜನೆಯಡಿ ನಿರ್ಮಿಸಿರುವ ನೂತನ ಅಂಗಡಿ ಮಳಿಗೆಗಳ ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್, ತಾಲ್ಲೂಕು ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರಾಟ ನಿಗಮ ನಿಯಮಿತ ಅಧ್ಯಕ್ಷರಾದ ಕೆ.ವಿ.ನಾಗರಾಜು,
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಆನಂದ ರೆಡ್ಡಿ ಬಾಬು, ಪೌರಾಯುಕ್ತರಾದ ಮಾಹಂತೇಶ್, ನಗರಸಭೆ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.









