ಬೆಂಗಳೂರು: ಚನ್ನಪಟ್ಟಣದಲ್ಲಿ (Channapattana) ವಿರೋಧಿಗಳು ವೀಕ್ ಆಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ವ್ಯಂಗ್ಯವಾಡಿದ್ದಾರೆ.
ಚನ್ನಪಟ್ಟಣದ ಕಾಂಗ್ರೆಸ್ (Congress) ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನೇ ಅಭ್ಯರ್ಥಿ ಎಂದು ಕೆಲಸ ಮಾಡುವಂತೆ ಹೇಳಿದ್ದೇನೆ. ವಿರೋಧ ಪಕ್ಷಗಳು ರಾತ್ರಿ ಎಲ್ಲಾ ಸಭೆ ನಡೆಸಿದ್ದಾರೆ. ಜೆಡಿಎಸ್ನವರು ಸೀಟು ಬಿಟ್ಟು ಕೊಡುತ್ತಾರೆ ಎಂದು ಯಾರೋ ಫೋನ್ ಮಾಡಿದ್ದರು. ಆದರೆ, ವಿರೋಧಿಗಳು ಇಷ್ಟೊಂದು ವೀಕ್ ಆಗಬಾರದಿತ್ತು ಎಂದು ವ್ಯಂಗ್ಯವಾಡಿದ್ದಾರೆ.
ಫೈಟ್ ಮಾಡ್ತಾರೆ ಎಂದುಕೊಂಡಿದ್ದೆ. ನಾನು ನಮ್ಮ ಕಾರ್ಯಕರ್ತರ ಮುಖಂಡರ ಅಭಿಪ್ರಾಯವನ್ನು ಕೇಳಿದ್ದೇನೆ. ಯಾರೇ ಅಭ್ಯರ್ಥಿಯಾದರು, ಡಿ.ಕೆ ಶಿವಕುಮಾರ್ ಅಭ್ಯರ್ಥಿ ಎಂದು ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. ನಮ್ಮ ಕಾರ್ಯಕರ್ತರ ಜೊತೆಗೆ ನಾನು ಮಾತನಾಡುತ್ತಿದ್ದೇನೆ. ಕಾರ್ಯಕರ್ತರು ಎಲ್ಲರ ಜೊತೆಗೂ ಮಾತನಾಡಿದ್ದೇನೆ. ರಾಜಕಾರಣದಲ್ಲಿ ಹಲವು ಸಾಧ್ಯತೆಗಳು ಇರುತ್ತವೆ. ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು. ಕಾರ್ಯಕರ್ತರನ್ನು ನಿಲ್ಲಿಸಿದರೂ ಕೂಡ ತಯಾರಿರಬೇಕು ಎಂದಿದ್ದಾರೆ.