ನವದೆಹಲಿ: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ ಕೇಂದ್ರ ಬಜೆಟ್ (Union Budget 2024) ನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಈ ಬಜೆಟ್ ಕಾಂಗ್ರೆಸ್ ಪ್ರಣಾಳಿಕೆ ಮತ್ತು ಹಿಂದಿನ ಬಜೆಟ್ಗಳ ಕಾಪಿ ಪೇಸ್ಟ್ ಎಂದು ಎಂದು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ (Rahul Gandhi), ಇದು ಕುರ್ಚಿ ಉಳಿಸಿಕೊಳ್ಳುವ ಬಜೆಟ್. ಮಿತ್ರಪಕ್ಷಗಳನ್ನು ಸಮಾಧಾನಪಡಿಸಿ, ಇತರೆ ರಾಜ್ಯಗಳಿಗೆ ಪೊಳ್ಳು ಭರವಸೆ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.
ಬಜೆಟ್ ನಲ್ಲಿ ಹಿಂಬಾಲಕರನ್ನು ಸಮಾಧಾನಪಡಿಸಲಾಗಿದೆ. ಇದು ‘ಎಎ’ಗಳಿಗೆ ಮಾತ್ರ ಪ್ರಯೋಜನವಾಗಿದೆ. ಸಾಮಾನ್ಯ ಭಾರತೀಯರಿಗೆ ಯಾವುದೇ ಪರಿಹಾರವಿಲ್ಲ. ಕಾಂಗ್ರೆಸ್ ಪ್ರಣಾಳಿಕೆ ಮತ್ತು ಹಿಂದಿನ ಬಜೆಟ್ ಗಳನ್ನು ಕಾಪಿ ಪೇಸ್ಟ್ ಮಾಡಿದ ಬಜೆಟ್ ಇದು ಎಂದು ಆರೋಪಿಸಿದ್ದಾರೆ. ಅಲ್ಲದೇ, ಕಾಂಗ್ರೆಸ್ ನ ಇನ್ನಿತರ ನಾಯಕರು ಕೂಡ ಬಜೆಟ್ ನ್ನು ವಿರೋಧಿಸಿದ್ದಾರೆ.








