SIDDARAMAIAH | ಸಿದ್ದರಾಮಯ್ಯ ಸಹೋದರ ವಿಧಿವಶ!
ಸಿದ್ದರಾಮನ ಹುಂಡಿಯಲ್ಲಿ ಅಂತ್ಯಕ್ರಿಯೆ
ಅನಾರೋಗ್ಯದಿಂದ ರಾಮೇಗೌಡ ಕೊನೆಯುಸಿರು
ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ರಾಮೇಗೌಡ
ತಮ್ಮನ ಅಂತಿಮ ದರ್ಶನ ಪಡೆಯಲಿರುವ ಸಿದ್ದರಾಮಯ್ಯ
ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ನಿಧನರಾಗಿದ್ದಾರೆ.
ರಾಮೇಗೌಡ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಆದ್ರೆ ಶುಕ್ರವಾರ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಅವರ ಅಂತ್ಯಕ್ರಿಯೆ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಇಂದು ನಡೆಯಲಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮನ ಅಂತಿಮ ದರ್ಶನ ಪಡೆಯಲಿದ್ದಾರೆ.
ಇಂದು ಮಧ್ಯಾಹ್ನದ ವೇಳೆಗೆ ಸಿದ್ದರಾಮಯ್ಯನ ಹುಂಡಿಯಲ್ಲಿ ರಾಮೇಗೌಡರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.








