Siddaramaiah | ಸಂವಿಧಾನದ ಆಶಯ ರಕ್ಷಿಸುವಲ್ಲಿ ಸರ್ಕಾರ ವಿಫಲ
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಉಡುಪಿ ಜಿಲ್ಲೆಯ ಕಾಪುವಿನ ಪ್ರಸಿದ್ಧ ಮಾರಿಗುಡಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅನುಮತಿ ನೀಡದಿರುವ ಬಗ್ಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಗಳನ್ನ ಮಾಡಿರುವ ಸಿದ್ದರಾಮಯ್ಯ, ಸಂವಿಧಾನದ ಆಶಯಗಳನ್ನು ಪಾಲಿಸುವುದು ಪ್ರತಿಯೊಂದು ಸರ್ಕಾರದ ಮೂಲ ಕರ್ತವ್ಯ.
ರಾಜ್ಯದಲ್ಲಿ ಸಂವಿಧಾನಕ್ಕೆ ಸವಾಲು ಹಾಕುತ್ತಿರುವ ಸಂವಿಧಾನೇತರ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲಾಗದ ರಾಜ್ಯ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ.
ಹಿಂದೂ ಧಾರ್ಮಿಕ ಸಮಾರಂಭಗಳಲ್ಲಿ ಮುಸ್ಲಿಂ ವರ್ತಕರ ಅಂಗಡಿ-ಮುಂಗಟ್ಟುಗಳಿಗೆ ಅವಕಾಶ ನೀಡದಿರಲು ಕೆಲವು ಹಿಂದೂ ಸಂಘಟನೆಗಳು ಒತ್ತಡ ಹೇರುತ್ತಿರುವುದು ಕಳವಳಕಾರಿ ಬೆಳವಣಿಗೆ.
ಇಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗಿರುವ ಜಿಲ್ಲಾಡಳಿತ ಮೌನವಾಗಿದ್ದು ಪರೋಕ್ಷ ಬೆಂಬಲ ನೀಡುತ್ತಿರುವುದು ಖಂಡನೀಯ ಎಂದು ಗರಂ ಆಗಿದ್ದಾರೆ. opposition-leader-siddaramaiah-slams-bjp