ಬಿಜೆಪಿ ಅವರದ್ದು ಕೊಟ್ಟ ಭರವಸೆ ಈಡೇರಿಸದ ವಚನ ಭ್ರಷ್ಟ ಸರ್ಕಾರ
ಬೆಳಗಾವಿ : ಬಿಜೆಪಿ ಅವರದ್ದು ಕೊಟ್ಟ ಭರವಸೆಗಳನ್ನು ಈಡೇರಿಸದ ವಚನ ಭ್ರಷ್ಟ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. Siddaramaiah
ಉತ್ತರ ಕರ್ನಾಟಕ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಸಿದ್ದರಾಮಯ್ಯ ತಮ್ಮ ಟ್ವೀಟ್ ಗಳಲ್ಲಿ..
ನಮ್ಮ ಐದು ವರ್ಷಗಳ ಆಡಳಿತದಲ್ಲಿ ನೀರಾವರಿ ಗೊಳಪಟ್ಟ ಪ್ರದೇಶ ಒಟ್ಟು 6.54 ಲಕ್ಷ ಎಕರೆ. ಅಂದರೆ ರಾಜ್ಯದ ಒಟ್ಟು ನೀರಾವರಿ ಪ್ರದೇಶದಲ್ಲಿ ಶೇ. 10 ನಮ್ಮ ಅವಧಿಯ ಕೊಡುಗೆಯಾಗಿದೆ. ನಾವು ನುಡಿದಂತೆ ನಡೆದಿದ್ದೇವೆ, ಬಿಜೆಪಿ ಅವರದ್ದು ಕೊಟ್ಟ ಭರವಸೆಗಳನ್ನು ಈಡೇರಿಸದ ವಚನ ಭ್ರಷ್ಟ ಸರ್ಕಾರ ಎಂದು ಟೀಕೆ ಮಾಡಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಾ ಬಂದಿದೆ, ಅವರ ಪ್ರಣಾಳಿಕೆಯ ಭರವಸೆ ಪ್ರಕಾರ ಈಗ ಕನಿಷ್ಠ 90,000 ಕೋಟಿ ಹಣ ಖರ್ಚು ಮಾಡಬೇಕಿತ್ತಲ್ಲವಾ? ಆದರೆ ಖರ್ಚಾದ ಒಟ್ಟು ಹಣ ರೂ. 33,835 ಕೋಟಿ ಮಾತ್ರ. ಈ ಬಿಜೆಪಿ ಸರ್ಕಾರ ಹೇಳೋದೊಂದು, ಮಾಡೋದೊಂದು.
ನಮ್ಮ ಐದು ವರ್ಷಗಳ ಆಡಳಿತದಲ್ಲಿ ನೀರಾವರಿ ಗೊಳಪಟ್ಟ ಪ್ರದೇಶ ಒಟ್ಟು 6.54 ಲಕ್ಷ ಎಕರೆ. ಅಂದರೆ ರಾಜ್ಯದ ಒಟ್ಟು ನೀರಾವರಿ ಪ್ರದೇಶದಲ್ಲಿ ಶೇ. 10 ನಮ್ಮ ಅವಧಿಯ ಕೊಡುಗೆಯಾಗಿದೆ.
ನಾವು ನುಡಿದಂತೆ ನಡೆದಿದ್ದೇವೆ, @BJP4Karnataka ಅವರದು ಕೊಟ್ಟ ಭರವಸೆಗಳನ್ನು ಈಡೇರಿಸದ ವಚನ ಭ್ರಷ್ಟ ಸರ್ಕಾರ. 17/17#Session
— Siddaramaiah (@siddaramaiah) December 24, 2021
ಆಲಮಟ್ಟಿ ಜಲಾಶಯವನ್ನು 519 ಮೀಟರ್ ನಿಂದ 524 ಮೀಟರ್ ಗೆ ಏರಿಸಿ, ಭೂಮಿ ಕಳೆದುಕೊಂಡವರಿಗೆ ರೂ. 25 – 30 ಲಕ್ಷ ಪರಿಹಾರ ನೀಡಲು ಸುಮಾರು ರೂ. 1.5 ಲಕ್ಷ ಕೋಟಿ ಖರ್ಚು ಮಾಡುವುದಾಗಿ ಸದನದಲ್ಲಿ ಯಡಿಯೂರಪ್ಪ ಹೇಳಿದ್ದರು. ಎಲ್ಲಿದೆ ದುಡ್ಡು?
ರಾಜ್ಯ ಬಿಜೆಪಿ 2018ರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಸುಜಲಾಂ, ಸುಫಲಾಂ ಯೋಜನೆಯಡಿ 1.5 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದರು. ಅದು ಭರವಸೆಯಾಗಿಯೇ ಉಳಿದಿದೆ ಎಂದು ಬರೆದುಕೊಂಡಿದ್ದಾರೆ.








