ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸ್ ಕ್ರಮ ಕುರಿತು ಸಂಸತ್ನಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.
ಈ ವೇಳೆ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ ನಡೆಸಲಾಯಿತು? ಎಂಬ ಪ್ರಶ್ನೆಯನ್ನು ಎತ್ತಿ, ಘಟನೆಯ ಕುರಿತು ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ವಿರೋಧ ಪಕ್ಷದ ನಾಯಕರು, ಈ ಎರಡೂ ವಿಷಯಗಳು ದೇಶದ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಗಂಭೀರ ವಿಚಾರಗಳಾಗಿದ್ದು, ಲೋಕಸಭೆಯಲ್ಲಿ ವಿಶೇಷ ಚರ್ಚೆಗೆ ಸಮಯ ನಿಗದಿಪಡಿಸಬೇಕು ಎಂದು ಸ್ಪೀಕರ್ಗೆ ಮನವಿ ಮಾಡಿದ್ದಾರೆ.








