ಉಪರಾಷ್ಟ್ರಪತಿ ಚುನಾವಣೆ – ವಿರೋಧ ಪಕ್ಷದ ಅಭ್ಯರ್ಥಿಯ ಮಾರ್ಗರೇಟ್ ಆಳ್ವಾ ನಾಮಪತ್ರ ಸಲ್ಲಿಕೆ…
ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಮಾರ್ಗರೆಟ್ ಆಳ್ವಾ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎಂ ವೆಂಕಯ್ಯ ನಾಯ್ಡು ಅವರ ಅಧಿಕಾರವಧಿಯ ನಂತರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ಕಾಂಗ್ರೆಸ್‌ನ ರಾಹುಲ್ ಗಾಂಧಿ, ಎನ್‌ಸಿಪಿಯ ಶರದ್ ಪವಾರ್, ಸಿಪಿಐ-ಎಂನ ಸೀತಾರಾಂ ಯೆಚೂರಿ, ಸಿಪಿಐನ ಡಿ ರಾಜಾ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನ. ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ವಿರುದ್ಧ 80 ವರ್ಷದ ಮಾರ್ಗರೇಟ್ ಆಳ್ವಾ ಕಣಕ್ಕಿಳಿದಿದ್ದಾರೆ.
Opposition V-P candidate Margaret Alva files nomination papers