ಆರ್ಕೆಸ್ಟ್ರಾ ಕಲಾವಿದರ ಬೆಂಬಲಕ್ಕೆ ನಿಂತ ಕಿಚ್ಚ ಸುದೀಪ
ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಆರ್ಕೆಸ್ಟ್ರಾ ನಿಷೇಧ ಮಾಡಲಾಗಿದೆ.
ಈ ಹಿನ್ನೆಲೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಆರ್ಕೆಸ್ಟ್ರಾಗೆ ಅನುಮತಿ ನೀಡುವಂತೆ ಒತ್ತಾಯಿಸಿ ವಾದ್ಯಗೋಷ್ಠಿ ಕಲಾವಿದರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದೀಗ ಪ್ರತಿಭಟನಾನಿತರ ವಾದ್ಯಗೋಷ್ಠಿ ಕಲಾವಿದರ ಬೆಂಬಲಕ್ಕೆ ನಟ ಕಿಚ್ಚ ಸುದೀಪ್ ನಿಂತಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಪ್ರತಿಭಟನಾ ನಿರತ ವಾದ್ಯಗೋಷ್ಠಿ ಕಲಾವಿದರ ಜತೆಗೆ ಇದ್ದೇನೆ.
ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ. ಅವರಿಗೆ ನಿಮ್ಮಿಂದಾದ ನೆರವು ನೀಡಿ ಎಂದು ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ವಿನಂತಿಸುತ್ತೇನೆ.
ಹಾಗೆಯೇ.. ಈ ಕಲಾವಿದರ ಪರವಾಗಿ ಸರ್ಕಾರ ಸಹ ಪೂರಕ ಕ್ರಮ ಕೈಗೊಳ್ಳಬೇಕು ಎಂದೂ ಕೋರುತ್ತೇನೆ.
ದೂರದರ್ಶನಗಳು ಇಲ್ಲದ ಕಾಲದಿಂದಲೂ ನಮ್ಮನ್ನು ರಂಜಿಸುತ್ತಿರುವ ಈ ಕಲಾ ಬಳಗವನ್ನು ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂಬುದು ನನ್ನ ಭಾವನೆ.
ನಮ್ಮ ಈ ಪ್ರತಿಭೆಗಳ ಪರವಾಗಿ ನಾವೇ ನಿಲ್ಲದಿದ್ದರೆ, ಇನ್ಯಾರು ನಿಲ್ಲುತ್ತಾರೆ ಅಲ್ಲವೇ? ಎಂದು ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









