ಕಲಬುರಗಿ: ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರ ಒಡೆತನದ ಶುಗರ್ ಫ್ಯಾಕ್ಟರಿ ಮುಚ್ಚಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.
ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಹತ್ತಿರ ಇರುವ ಸಿದ್ದಸಿರಿ ಸಕ್ಕರೆ ಕಾರ್ಖಾನೆಯಲ್ಲಿನ ಕಲುಷಿತ ನೀರನ್ನು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದು ವಾಯು ಹಾಗೂ ಜಲ ಕಾಯ್ದೆ ಉಲ್ಲಂಘನೆಯಾಗಿದೆ ಎನ್ನಲಾಗಿದ್ದು, ಈಗ ಬಂದ್ ಮಾಡಲು ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ. ಫ್ಯಾಕ್ಟರಿಗೆ ವಿದ್ಯುತ್, ನೀರಿನ ಸಂರ್ಪಕ ಕಡಿತಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.