ಸಂಘಟನೆಗಳು ವಿದ್ಯಾರ್ಥಿಗಳಿಗೆ ಪ್ರಚೋದನೆ ಕೊಡಬಾರದು: ಸಿಎಂ ಬೊಮ್ಮಾಯಿ Saaksha Tv
ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಕುರಿತು ರಾಜ್ಯದ ಶಾಂತಿಗೆ ಭಂಗ ತರುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಎರಡು ಕಡೆಯಿಂದಲೂ ಸಮಸ್ಯೆ ಉಂಟಾಗಿದೆ. ಶಾಲೆಗಳಲ್ಲಿ ಸಮವಸ್ತ್ರ ಪ್ರಕರಣದ ಅರ್ಜಿಯೂ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ ಆಗಿದೆ. ಈ ಬಗ್ಗೆ ಮಧ್ಯಾಹ್ನ ಕೇಸ್ ವಿಚಾರಣೆ ನಡೆಯಲಿದೆ. ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಕಾಲೇಜುಗಳಿಗೆ ರಜೆ ಕೊಡಲಾಗಿದೆ ಆದಕಾರಣ ಮಾತನಾಡುವುದನ್ನು ನಿಲ್ಲಿಸಿ ಎಂದು ತಿಳಿಸಿದರು.
ಅಲ್ಲದೇ ಇದರಿಂದ ಯಾರಿಗೂ ರಾಜಕೀಯ ಲಾಭ ಆಗಲ್ಲ. ಯಾವ ಸಂಘಟನೆಗಳು ಕೂಡ ವಿದ್ಯಾರ್ಥಿಗಳಿಗೆ ಪ್ರಚೋದನೆ ಕೊಡಬಾರದು. ಕೇಸ್ ಕೋರ್ಟ್‍ನಲ್ಲಿದೆ, ಕೋರ್ಟ್ ತೀರ್ಪಿಗಾಗಿ ಕಾಯೋಣ. ಶಾಂತಿ ಕದಡುವ ಬಗ್ಗೆ ಯಾರು ಕೂಡ ಮಾತಾಡಬಾರದು ಎಂದು ಮನಿವಿ ಮಾಡಿಕೊಂಡರು.
ಸಂಜೆ ಶಿಕ್ಷಣ ಸಚಿವ ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಲಾಗುವುದು. ಶಾಲಾ ಕಾಲೇಜುಗಳಲ್ಲಿ ಮೊದಲಿನ ತರಹ ಸೌಹಾರ್ದ ಶಾಂತಿ ತರುವ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ ಮಾಡುತ್ತದೆ ಎಂದರು.