ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ಓರಿಯೋ” ಗೆ ಕಂಠೀರವ ಸ್ಟುಡಿಯೋದಲ್ಲಿ ಚಾಲನೆ..! ಸಿನಿಮಾ ಅದ್ಬುಲ್ ಕಲಾಮ್ ಮಾತುಗಳೇ ಸ್ಪೂರ್ತಿ..!

Namratha Rao by Namratha Rao
November 30, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

“ಓರಿಯೋ” ಗೆ ಕಂಠೀರವ ಸ್ಟುಡಿಯೋದಲ್ಲಿ ಚಾಲನೆ..! ಸಿನಿಮಾ ಅದ್ಬುಲ್ ಕಲಾಮ್ ಮಾತುಗಳೇ ಸ್ಪೂರ್ತಿ..!

ವಿಭಿನ್ನ ಟೈಟಲ್ ನಿಂದಲೇ ಗಮನ ಸೆಳೆಯುತ್ತಿರುವ ಕನ್ನಡದ ಹೊಸ ಸಿನಿಮಾ ಓರಿಯಾ ಸುಮಾರು 4 ಭಾಷೆಗಗಳಲ್ಲಿ ರಿಲೀಸ್ ಆಗಲಿದೆ..  ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ “ಓರಿಯೋ” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಚಿತ್ರದ ಮೊದಲ ಸನ್ನಿವೇಶಕ್ಕೆ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಸದಸ್ಯರಾದ ಮಂಜುನಾಥ್ ಆರಂಭಫಲಕ ತೋರಿದರು. ಮಾಜಿ‌ ನಗರ ಪಾಲಿಕೆ ಸದಸ್ಯರಾದ ಕೆ.ಮುನಿರಾಜು ಕ್ಯಾಮೆರಾ ಚಾಲನೆ ಮಾಡಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಬಳಿಕ ಮಾತನಾಡಿದ ನಿರ್ದೇಶಕ ನಂದನ್ ಪ್ರಭು ಅವರು ಅಪ್ಪುವನ್ನ ನೆನೆಯುವ ಮೂಲಕ ಮಾತು ಆರಂಭಿಸಿದರು. ಇಂದಿಗೆ ಅಪ್ಪು ಅವರು  ನಮ್ಮನ್ನು ಅಗಲಿ ಒಂದು ತಿಂಗಳಾಯಿತು. ಆದರೂ ದು:ಖ ಕಡಿಮೆಯಾಗಿಲ್ಲ. ಅವರಿಗೆ ನಮ್ಮ ನಮನ ಎಂದು  ಮಾತು ಮುಂದುವರೆಸಿ , ನಾನು ಈ ಹಿಂದೆ ‘ಪ್ರೀತಿಯ ಲೋಕ’ ಹಾಗೂ ‘ಲವ್ ಇಸ್ ಪಾಯ್ ಸನ್’ ಚಿತ್ರಗಳನ್ನು ನಿರ್ದೇಶಿಸಿದ್ದೆ. 6 ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದೇನೆ.

ನಾನು ನಿರ್ದೇಶನಕ್ಕೆ ಬರುವ ಮೊದಲು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ(ರಾಷ್ಟ್ರಪತಿ ಆಗುವುದಕ್ಕಿಂತ ಮುಂಚೆ) ಅವರ ಕಾರಿಗೆ ಚಾಲಕನಾಗಿದ್ದೆ.

ಅವರು ನನ್ನೊಂದಿಗೆ ಆಡುತ್ತಿದ್ದ ಮಾತುಗಳು ಈ ಕಥೆಗೆ ಸ್ಪೂರ್ತಿ. “ಓರಿಯೋ” ಪದಕ್ಕೆ  ಒಂದೊಂದು ದೇಶದಲ್ಲಿ ಒಂದೊಂದು ಹೆಸರಿದೆ. ಭಾರತದಲ್ಲಿ ಆ ಹೆಸರಿನ ಬಿಸ್ಕೆಟ್ ಸಹ ಇದೆ ಎಂದು ವಿವರಣೆ ನೀಡಿದರು.

ನಾವು ಎಚ್ಚರ ತಪ್ಪಿದರೆ, ಮುಂದೊಂದು ದಿನ ಹೀಗೂ ಆಗಬಹುದು ಎಂಬ ಎಚ್ಚರಿಕೆಯ ಸಂದೇಶವನ್ನು ಇಡೀ ವಿಶ್ವಕ್ಕೆ ನೀಡುವ ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾವಿದು ಎಮದು ನಿರ್ದೇಶ ನಂದ ಪ್ರಭು ಅವರು ವಿವರಿಸಿದ್ರು..

ಅಲ್ಲದೇ ಪ್ರಮುಖ ಪಾತ್ರಧಾರಿ ನಿತಿನ್ ಗೌಡ  ಮಾತನಾಡಿ ನಾನು ಮೂಲತಃ ಆರ್ಕಿಟೆಕ್ಟ್. ಇದು ನನ್ನ ಮೊದಲ ಚಿತ್ರ. ಪಾತ್ರ ಚೆನ್ನಾಗಿದೆ. ಅವಕಾಶ ನೀಡಿದ್ದ ನಂದನ್ ಪ್ರಭು ಅವರಿಗೆ ಧನ್ಯವಾದ ಎಂದರು.

ಬಳಿಕ ಮಾತನಾಡಿದ ನಟ ಸುಚಿತ್ ನಾನು “ರಥಾವರ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದೇನೆ.  ವೈರ ಹಾಗೂ ಪುಟಾಣಿ ಪಂಟರ್ ಚಿತ್ರಗಳಲ್ಲೂ ಅಭಿನಯಿಸಿದ್ದೇನೆ ಎಂದು ಹೇಳ್ತಾ  ಈ ಚಿತ್ರದಲ್ಲಿ ಉತ್ತಮ ಪಾತ್ರ ನೀಡಿರುವ ನಿರ್ದೇಶಕರಿಗೆ  ಧನ್ಯವಾದಗಳನ್ನ ಅರ್ಪಿಸಿದ್ರು.

ಸಿನಿಮಾದಲ್ಲಿ ಶುಭಿ, ಲತಾ ನಾಯಕಿಯರಾಗಿದ್ರೆ , ಸಾಯಿಕಿರಣ್ ಸಂಗೀತ ಚಿತ್ರಕ್ಕಿದೆ.  ಡಿಸೆಂಬರ್ 1 ರಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ಮಡಿಕೇರಿ, ಚಿಕ್ಕಮಗಳೂರಿನಲ್ಲಿ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಶಿವಾಂಜನೇಯ ಪ್ರೊಡಕ್ಷನ್ಸ್ ಲಾಂಛನದಲ್ಲಿ  ವಿಜಯಶ್ರೀ ಆರ್ ಎಂ ಹಾಗೂ ವೈಶಾಲಿ.ವೈ.ಜೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟಿ.ಕೃಷ್ಣಪ್ಪ ಹಾಗೂ ರೇಣುಕಾ ಪ್ರಭಾಕರ್ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ಸಂಭಾಷಣೆ ಹಾಗೂ ಸಹ ನಿರ್ದೇಶನ ಬಿ.ರಾಜರತ್ನ ಅವರದು.

ಬ್ಯಾಟಪ್ಪ ಗೌಡ ಛಾಯಾಗ್ರಹಣ, ಸಾಯಿಕಿರಣ್ ಸಂಗೀತ ನಿರ್ದೇಶನ, ಶ್ರೀನಿವಾಸ್ ಪಿ ಬಾಬು ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಜೈ ಹರಿಕೃಷ್ಣ ಅವರ ನೃತ್ಯ ನಿರ್ದೇಶನ “ಓರಿಯೋ” ಚಿತ್ರಕ್ಕಿದೆ.

Tags: #saakshatvAbdul Kalamoriyo kannada filmSandalwood
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram