ಬೆಂಗಳೂರು: ಒಂದು ಲಾಕ್‍ಡೌನ್, ಇನ್ನೊಂದೆಡೆ ಮುಖ್ಯಮಂತ್ರಿ, ಗೃಹ ಸಚಿವರು ಕೊರೊನಾ ಕೇರ್ ಸೆಂಟರ್ ಸೇರಿದಂತೆ ನಗರದಲ್ಲಿ ಓಡಾಡುತ್ತಿರುವುದರಿಂದ ಹಗಲು ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್ ಅವರಿಗೂ ಕೊರೊನಾ ಸೋಂಕು ತಗುಲಿರುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಗರದಲ್ಲಿ ಕೊರೋನಾ ಸೊಂಕು ಹರಡುವುದನ್ನು ನಿಯಂತ್ರಿಸುವುದು, ಕೊರೊನಾ ಪಾಸಿಟಿವ್ ಪ್ರಕರಣಗಳಿಂದಾಗಿ ಹಲವು ಪೊಲೀಸ್ ಠಾಣೆಗಳು ಸೀಲ್‍ಡೌನ್ ಆಗಿವೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಭಾಸ್ಕರ್ ರಾವ್ ಹರಸಾಹಸ ಪಡುತ್ತಿದ್ದಾರೆ.
ಕಮೀಷನರ್ ಕಾರು ಚಾಲಕನಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 22ರವರೆಗೆ ಲಾಕ್‍ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಯಶಸ್ವಿ ಮಾಡಲು ಪೊಲೀಸ್ ಸಿಬ್ಬಂದಿ ಕೊರತೆ ನಡುವೆಯೇ ಭಾಸ್ಕರ್ ರಾವ್ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ನಿನ್ನೆ ಒಂದೇ ದಿನ 2300 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ನಗರದಲ್ಲಿ ಪೊಲಿಸರು, ವೈದ್ಯರೂ ಸಹ ಹೆಮ್ಮಾರಿ ಕೊರೊನಾಗೆ ಘಡಘಡ ನಡುಗುವಂತಾಗಿದೆ.
ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...








