ಆಸ್ಕರ್ ಫರ್ನಾಂಡಿಸ್ ನಿಧನ : ಕಂಬನಿ ಮಿಡಿದ ಕಾಂಗ್ರೆಸ್ ನಾಯಕರು

1 min read
Surgery performed on Oscar Fernandes

ಆಸ್ಕರ್ ಫರ್ನಾಂಡಿಸ್ ನಿಧನ : ಕಂಬನಿ ಮಿಡಿದ ಕಾಂಗ್ರೆಸ್ ನಾಯಕರು

ಬೆಂಗಳೂರು : ಕಾಂಗ್ರೆಸ್ ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ವಿಧಿವಶರಾಗಿದ್ದಾರೆ.

ಕೆಲದಿನಗಳ ಹಿಂದೆ ಯೋಗ ಮಾಡುವ ವೇಳೆ ಆಸ್ಕರ್ ಅವರು ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ಇನ್ನು ಹಿರಿಯ ನಾಯಕನ ನಿಧನಕ್ಕೆ ಕಾಂಗ್ರೆಸ್ ನಾಯಕರು ಟ್ವಿಟ್ಟರ್ ನಲ್ಲಿ ಕಂಬನಿ ಮಿಡಿದಿದ್ದಾರೆ.

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಸರಳ,ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಕಾರ್ಯಕರ್ತರ ನಾಯಕರಾಗಿದ್ದರು. ಆಸ್ಕರ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುವೆ ಎಂದು ಕಂಬನಿ ಮಿಡಿದಿದ್ದಾರೆ.

Oscar Fernandes  saaksha tv

ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ, ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ ಆಸ್ಕರ್ ಫರ್ನಾಂಡಿಸ್ ಅವರು ಇಹಲೋಕ ತ್ಯಜಿಸಿರುವುದು ಮನಸ್ಸಿಗೆ ತೀವ್ರ ನೋವನ್ನುಂಟುಮಾಡಿದೆ. ದೇಶಕ್ಕಾಗಿ ಮತ್ತು ಪಕ್ಷಕ್ಕಾಗಿ ಅಪಾರ ಸೇವೆ ಸಲ್ಲಿಸಿದ ಶ್ರೀಯುತರು, ತಮ್ಮ ದೂರದೃಷ್ಟಿ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳಿಂದಾಗಿ ಜನಮಾನಸದಲ್ಲಿ ಯಾವತ್ತಿಗೂ ನೆನಪಿನಲ್ಲುಳಿಯಲಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ರಾಜ್ಯಸಭಾ ಸದಸ್ಯರು, ಮಾಜಿ ಸಚಿವರೂ ಆಗಿದ್ದ ಶ್ರೀ ಆಸ್ಕರ್ ಫರ್ನಾಂಡಿಸ್ ಅವರು ಇನ್ನಿಲ್ಲವೆಂಬ ಸುದ್ದಿ ಆಘಾತ ತಂದಿದೆ.
ಸರಳತೆ-ಸಜ್ಜನಿಕೆಗೆ ಹೆಸರಾಗಿದ್ದ ಅವರು ಅಭಿವೃದ್ಧಿಶೀಲ ಚಿಂತಕರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರಿಗೆ ದುಃಖ ಭರಿಸುವ ಶಕ್ತಿನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd