ಉಳಿದ ಶಾಲಾ ತರಗತಿಗಳ ಆರಂಭ: ಫೆ. 16ರಂದು ಸಭೆ : ಸುರೇಶ್ ಕುಮಾರ್
ಬೆಂಗಳೂರು : ರಾಜ್ಯದ ಎಲ್ಲ ಭಾಗಗಳಿಂದಲೂ ಪ್ರಸ್ತುತ ಶೈಕ್ಷಣಿಕ ವರ್ಷದ ಉಳಿದ ತರಗತಿಗಳನ್ನು ಆರಂಭಿಸಬೇಕೆಂಬ ಪೋಷಕರು, ವಿದ್ಯಾರ್ಥಿ ಸಮುದಾಯ ಒತ್ತಾಯದ ಹಿನ್ನೆಲೆಯಲ್ಲಿ ಶಾಲಾರಂಭ ಕುರಿತಂತೆ ಫೆಬ್ರವರಿ 16ರಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಇಲಾಖೆಯ ಹಲವಾರು ವಿಷಯಗಳ ಮತ್ತು ಈಗಾಗಲೇ ಆರಂಭವಾಗಿರುವ ತರಗತಿಗಳ ಹಾಜರಾತಿ ಪ್ರಗತಿ ಪರಿಶೀಲಿಸಿದ ಸುರೇಶ್ ಕುಮಾರ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಉಳಿದ ತರಗತಿಗಳ ಆರಂಭ ಕುರಿತು ವ್ಯಾಪಕವಾದ ಒತ್ತಾಯ ಕೇಳಿಬರುತ್ತಿದೆ. ಇತ್ತೀಚೆಗೆ ಭೇಟಿ ನೀಡಿದ 15ಕ್ಕೂ ಹೆಚ್ಚು ಜಿಲ್ಲೆಗಳ ಹಲವಾರು ಶಾಲೆಗಳಲ್ಲಿ ಕೋವಿಡ್ ನಿಯಮಗಳ ಪಾಲನೆ ಮಾಡುತ್ತಿರುವುದನ್ನು ತಾವು ಖುದ್ದಾಗಿ ಪರಿಶೀಲಿಸಿದ್ದು, ಶಾಲೆಗಳು ತಡವಾಗಿ ಆರಂಭವಾಗಿರುವುದರಿಂದ ಶಾಲೆಗಳಿಗೆ ಬಹು ಆಸ್ಥೆಯಿಂದ ಬರುತ್ತಿದ್ದಾರೆ. ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಪಾಠ ಪ್ರವಚನ ಆಲಿಸುತ್ತಿರುವುದು ಕಂಡು ಬಂದಿದೆ ಎಂದರು.
ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಉಪನಿರ್ದೇಶಕರ ಕಚೇರಿಗಳಲ್ಲಿ ಕೆಲಸಗಳು ಸರಿಯಾಗಿ ಹಾಗೂ ಸಕಾಲದಲ್ಲಿ ಆಗುತ್ತಿಲ್ಲ ಎಂಬ ದೂರಿನ ಬಗ್ಗೆ ಮಾತನಾಡಿ, ಈ ಬಗ್ಗೆ ಕಡತ ವಿಲೇವಾರಿ ಯಜ್ಞಕ್ಕೆ ಚಾಲನೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ತಂತ್ರಜ್ಞಾನಾಧಾರಿತವಾದ ಆಡಳಿತಕ್ಕೆ ಪ್ರಾಶಸ್ತ್ಯ ನೀಡಬೇಕು. ಮಾರ್ಚ್ ಒಂದರಂದು ಧಾರವಾಡ ಅಪರ ಆಯುಕ್ತಾಲಯ ವಿಭಾಗ ವ್ಯಾಪ್ತಿಯಲ್ಲಿ ಕಡತ ವಿಲೇವಾರಿ ಆದಾಲತ್ ನ್ನು ತಮ್ಮ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಅದೇ ಮಾದರಿಯಲ್ಲಿ ಉಳಿದ ಆಯುಕ್ತಾಲಯಗಳೂ ಕ್ರಮ ವಹಿಸಲು ಮುಂದಾಗಬೇಕೆಂದು ಸೂಚಿಸಿದರು.
ಈಗಾಗಲೇ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಭೌತಿಕ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪರೀಕ್ಷಾಭಿಮುಖವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದು, ಅಧಿಕೃತ ಪರೀಕ್ಷಾ ವೇಳಾಪಟ್ಟಿಯತ್ತ ಮುಖ ಮಾಡಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
10 ಮತ್ತು 12ನೇ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶಗಳನ್ನು ಜೂನ್ ಅಂತ್ಯದೊಳಗೆ ಮತ್ತು ಉಳಿದ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶ ಘೊಷಣೆಯನ್ನು ಜೂ. 10ರೊಳಗೆ ಪೂರ್ಣಗೊಳಿಸಿ ಈ ಎಲ್ಲ ಪ್ರಕ್ರಿಯೆ ಮುಗಿದ ತಕ್ಷಣವೇ ಮಂದಿನ ಶೈಕ್ಷಣಿಕ ವರ್ಷದ ತರಗತಿಗಳನ್ನು ಏಕ ಕಾಲಕ್ಕೆ ಆರಂಭಗೊಳಿಸಲಾಗುವುದು ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









