ಹಾಸನ : ನಮ್ಮ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಅವರು ಹೇಳಿದ್ದಾರೆ.
ಹಾಸನದ ನಗರಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಮುಖ್ಯಮಂತ್ರಿಗಳು ಹೆಚ್. ವಿಶ್ವನಾಥ್ ಅವರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಏನು ಸಿಗಬೇಕು ಎಂಬೊದನ್ನ ಸಿಎಂ ತೀರ್ಮಾನ ಮಾಡ್ತಾರೆ. ನಮ್ಮ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡ ಧೀಮಂತ ನಾಯಕ ಎಂದರು.
ಇದೇ ವೇಳೆ ಸಿದ್ದರಾಮಯ್ಯ ಆರೋಪದ ಬಗ್ಗೆ ಮಾತನಾಡಿದ ಅವರು, ಯಾವುದೇ ಲೆಕ್ಕವನ್ನು ಈಗಾಗಲೇ ಕೊಟ್ಟಿದ್ದೇವೆ. ಬಿಡಿ ಬಿಡಿಯಾಗಿ ಲೆಕ್ಕ ಕೊಟ್ಟಿದ್ದೇವೆ. ನಮ್ಮ ಸರ್ಕಾರದಲ್ಲಿ ಎರಡು ಸಾವಿರ ಕೋಟಿ ಹಗರಣ ನಡೆದಿಲ್ಲ ಎಂದು ತಿರುಗೇಟು ನೀಡಿದ್ದಾರೆ.








