ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಡಲು ನಮ್ಮ ಸರ್ಕಾರ ಬದ್ಧ : ಮುರುಗೇಶ್ ನಿರಾಣಿ Murugesh Nirani saaksha tv
ಬೆಳಗಾವಿ : ಡಾ.ಸರೋಜಿನಿ ಮಹಿಷಿ ವರದಿಯಂತೆ , ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ,
ಕಲಾಪದ ಪ್ರಶ್ನೋತ್ತರದ ವೇಳೆ ಪ್ರಶ್ನೆಯೊಂದಕ್ಕೆ ಉತ್ತರರಿಸಿದ ಸಚಿವ ಮುರುಗೇಶ್ ನಿರಾಣಿ , ಡಾ.ಸರೋಜಿನಿ ಮಹಿಷಿ ವರದಿಯಂತೆ , ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.
ಅಲ್ಲದೇ ಡಾ.ಸರೋಜಿನಿ ಮಹಿಷಿ ವರದಿಯಂತೆ ಕೈಗಾರಿಕಾ ಪ್ರದೇಶಗಳಿಗಾಗಿ ಜಮೀನು ನೀಡಿದ ರೈತರಿಗೆ ಪರಿಹಾರ ನೀಡುವುದರ ಜೊತೆಗೆ ಅವರ ಕುಟುಂಬದ ಸದಸ್ಯರಿಗೆ ಜಮೀನು ನೀಡಿದ್ದೇವೆ. ಯಾವುದೇ ಕಾರಣಕ್ಕೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದಕ್ಕೂ ಮುನ್ನಾ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಅವರ ಘನತ್ಯಾಜ್ಯ ವಿಲೇವಾರಿ ಬಗ್ಗೆ ಪ್ರಶ್ನೆ ಕೇಳಿದರು.
ಇದಕ್ಕೆ ಉತ್ತರಿಸಿದ ಸಚಿವ ಎಂ.ಟಿ.ಬಿ.ನಾಗರಾಜ್, ಮೈಸೂರು ಜಿಲ್ಲೆ ತೀ.ನರಸೀಪುರ ತಾಲ್ಲೂಕಿನ ಪುರಸಭೆಯ ಕೂಡ್ಲೂರು ಗ್ರಾಮದಲ್ಲಿ ನಗರಸಭೆ ವತಿಯಿಂದ ಜಮೀನು ಹಸ್ತಾಂತರವಾದ ತಕ್ಷಣವೇ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಾಪನೆ ಮಾಡುವುದಾಗಿ ತಿಳಿಸಿದರು.
ಅಲ್ಲದೇ ಕೂಡ್ಲೂರು ಗ್ರಾಮದಲ್ಲಿ ಐದು ಎಕರೆ ಜಮೀನಿನಲ್ಲಿ ತ್ಯಾಜ್ಯ ಘಟಕವನ್ನು ನಿರ್ಮಾಣ ಮಾಡಲು ತೀರ್ಮಾನಿಸಿದ್ದೇವೆ. ಈ ಜಮೀನು ನಗರಸಭಾ ವ್ಯಾಪ್ತಿಯಲ್ಲಿದ್ದು, ಜಮೀನು ಹಸ್ತಾಂತರವಾದ ತಕ್ಷಣವೇ ನಿರ್ಮಾಣ ಮಾಡುತ್ತೇವೆ ಎಂದು ಸದನಕ್ಕೆ ತಿಳಿಸಿದರು.