ಬೆಂಗಳೂರು: ಪೊಲೀಸರು (Police) ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರದ ಸಹಕಾರವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಸರ್ಕಾರವು ಮುಂದಿನ ವರ್ಷ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2 ಸಾವಿರ ಕೋಟಿ ನೀಡಲಿದೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ (New Police Stations) ನಿರ್ಮಾಣ ಆಗುತ್ತಿವೆ ಎಂದು ಹೇಳಿದ್ದಾರೆ.
ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದಿದ್ದಾರೆ.