ನಮ್ಮ ಸರ್ಕಾರ ಬುಲೆಟ್ ಟ್ರೈನ್ ಇದ್ದಹಾಗೆ : ರಾಮುಲು
ಬಳ್ಳಾರಿ : ಅಭಿವೃದ್ಧಿ ವಿಚಾರದಲ್ಲಿ ನಮ್ಮ ಬಿಜೆಪಿ ಸರ್ಕಾರ ಬುಲೆಟ್ ಟ್ರೈನ್ ಇದ್ದಹಾಗೆ ಎಂಂದು ಸಾರಿಗೆ ಸಚಿವ ಬಿ ಶ್ರೀ ರಾಮುಲು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ಶ್ರೀರಾಮುಲು, ನಮ್ಮ ಸರ್ಕಾರ ಜನಪರವಾದ ಕೆಲಸ ಮಾಡುತ್ತಿದೆ. ಅದು ಅಭಿವೃದ್ಧಿ ವಿಚಾರದಲ್ಲಿ ಬುಲೆಟ್ ಟ್ರೈನ್ ಇದ್ದ ಹಾಗೆ, ಅದೇ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಒಳ್ಳೆಯ ಆಡಳಿತ ನೀಡಬೇಕು ಮತ್ತು ಜನಪರ ಕಾರ್ಯಕ್ರಮಗಳನ್ನು ನೀಡಬೇಕು ಎಂದು ರಾಜ್ಯದ ಪ್ರವಾಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಾವು ಸಂಪೂರ್ಣವಾಗಿ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಸಾರಿಕೆ ನೌಕರರ ಬೇಡಿಕೆಗಳ ಬಗ್ಗೆ ಮಾತನಾಡಿದ ರಾಮುಲು, ಸಾರಿಗೆ ನೌಕರರು ವೇತನ ಪರಿಷ್ಕರಣೆ ಮಾಡಲಾಗುವುದು. ಎರಡು ತಿಂಗಳ ಸಂಬಳ ಬಾಕಿ ಇದೆ. ಎರಡು ಮೂರು ದಿನಗಳಲ್ಲಿ ಅವರಿಗೆ ಸಂಬಳ ನೀಡಲಾಗುವುದು. ಸಾರಿಗೆ ಇಲಾಖೆ ನೋ ಪ್ರಾಫಿಟ್, ನೋ ಲಾಸ್ ನಲ್ಲಿ ಕೆಲಸ ಮಾಡಬೇಕಿದೆ ಎಂದು ಮನವಿ ಮಾಡಿಕೊಂಡರು.
ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಿಜೆಪಿ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಎಂಬ ಹೇಳಿಕೆಗೆ ಕಿಡಿಕಾರಿದ ರಾಮುಲು, ಕಾಂಗ್ರೆಸ್ ಒಂದು ಒಡೆದ ಮನೆಯಾಗಿದೆ. ನಮ್ಮ ಸರ್ಕಾರಕ್ಕೆ ಆಪತ್ತು ಬಂದಾಗ ಅವರೆಲ್ಲ ಒಂದಾಗುತ್ತಾರೆ. ಕಾಂಗ್ರೆಸ್ ನವರು ದೆಹಲಿಗೆ ಹೋದಾಗ ಮಾತ್ರ ಒಂದಾಗುತ್ತಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮುಂದೆ ಮಾತ್ರ ಕೈ ಕೈ ಹಿಡಿಯುತ್ತಾರೆ. ಫೆÇೀಟೋಗೆ ಪೆÇೀಸ್ ನೀಡುತ್ತಾರೆ ಎಂದು ವ್ಯಂಗ್ಯವಾಡಿದರು. ಜೊತೆಗೆ ಮುಂದಿನ ಚುನಾವಣೆಯಲ್ಲಿ ಗೆಲುವು ನಮ್ಮದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.