ಆದ್ರೆ ಈ ಎಲ್ಲಾ ವದಂತಿಗಳಿಗೆ ಸ್ವತಃ ಜಿ.ಟಿ ದೇವೇಗೌಡ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.”ನಾನು ಜೆಡಿಎಸ್ ಪಕ್ಷದಿಂದ ಗೆದ್ದಿದ್ದೇನೆ. ಜೆಡಿಎಸ್‌ನಲ್ಲೇ ಇರುತ್ತೇನೆ. ಶಾಸಕ ಸ್ಥಾನದ ಅವಧಿ ಮುಗಿಯಲು ಇನ್ನೂ ಮೂರು ವರ್ಷಗಳಿವೆ. ಬೇರೆ ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ” ಎಂದು ಜಿಟಿಡಿ ತಿಳಿಸಿದ್ದಾರೆ.
ಅಲ್ಲದೆ ಇದೇ ವೇಳೆ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ, “ಜಿ. ಟಿ. ದೇವೇಗೌಡ ಪಕ್ಷ ಬಿಟ್ಟು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜಿಟಿಡಿ, “ಅಸಮಾಧಾನವಿದ್ದವರು ಪಕ್ಷ ಬಿಟ್ಟು ಹೋಗಲಿ ಎಂದು ಎಚ್. ಡಿ. ದೇವೇಗೌಡರು ನೇರವಾಗಿ ಹೇಳಿದ್ದಾರೆ. ಅವರ ಮಾತು ನಿಜ, ಕಾರ್ಯಕರ್ತರು ಪಕ್ಷದ ಆಸ್ತಿ” ಎಂದರು.








