ADVERTISEMENT
Tuesday, May 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಚೀನಾದ ದಬ್ಬಾಳಿಗೆ ನಡೆಯಲ್ಲ, ನಮ್ಮ ಸೈನಿಕರು ಎಲ್ಲ ರೀತಿಯಲ್ಲಿ ಸಮರ್ಥರು : ಹೆಚ್.ಡಿ.ಕುಮಾರಸ್ವಾಮಿ

admin by admin
June 17, 2020
in National, Newsbeat, ದೇಶ - ವಿದೇಶ
H D Kumaraswamy
Share on FacebookShare on TwitterShare on WhatsappShare on Telegram

ಬೆಂಗಳೂರು : ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಚೀನಾ ಮತ್ತು ಭಾರತದ ನಡುವೆ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಸದ್ಯ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ದೇಶದೆಲ್ಲೆಡೆ ಇದೇ ವಿಚಾರವಾಗಿ ಚರ್ಚೆ ಆಗುತ್ತಿದೆ. ಏತನ್ಮಧ್ಯೆ ಚೀನಾ ಮತ್ತು ಭಾರತದ ಘರ್ಷಣೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು,
ಭಾರತ ಹಾಗೂ ಚೀನಾ ನಡುವೆ ಯುದ್ಧ ಸಂಘರ್ಷವಾಗಿದ್ದು, ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದು ಹೇಳಿದ್ದಾರೆ.

ದೇವನಹಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ದುರದೃಷ್ಟಕರ ವಿಚಾರವಾಗಿದೆ. ಈಗಾಗಲೇ ದೇಶದಲ್ಲಿ ಕೋವಿಡ್ 19 ಸಮಸ್ಯೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಈ ವೇಳೆ ನಮ್ಮ ದೇಶ ಮತ್ತು ಚೀನಾ ದೇಶದ ನಡುವೆ ಸಂಘರ್ಷ ನಡೆಯುವಂತ ವಾತಾವರಣ ನಿರ್ಮಾಣವಾಗಿದೆ. ಇದು ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದರು.

Related posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

May 12, 2026
ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

May 12, 2026

ಭಾರತ ಹಾಗೂ ಚೀನಾ ಎರಡು ದೇಶದ ಪ್ರಧಾನಮಂತ್ರಿಗಳಿಗೆ ನಾನು ಮನವಿ ಮಾಡುತ್ತೇನೆ. ಅದೇನೆಂದರೆ ಇಂತಹ ಸನ್ನಿವೇಶದಲ್ಲಿ ಪರಸ್ಪರ ಅವಿಶ್ವಾಸದ ಹಿನ್ನೆಲೆಯಲ್ಲಿ ಅಥವಾ ಬೇರೆ ಬೇರೆ ಕಾರಣದಿಂದ ಯುದ್ಧದ ವಾತಾವರಣ ನಿರ್ಮಾಣ ಮಾಡುವುದು ಬೇಡ. ಇದರಿಂದ ಒಂದು ಕಡೆ ಅಮಾಯಕ ಯೋಧರ ಬಲಿಯಾಗುತ್ತಿದ್ದಾರೆ. ಮತ್ತೊಂದು ಕಡೆ ಎರಡು ದೇಶಗಳ ನಡುವಿನ ಸಾಮರಸ್ಯ ಹಾಳುಮಾಡುವುದು ಬೇಡ ಎಂದು ಮನವಿ ಮಾಡಿಕೊಂಡರು.

ಇದೇ ವೇಳೆ ಪ್ರಧಾನಿ ಬಗ್ಗೆ ಮಾತನಾಡಿದ ಅವರು, ಈಗ ನಮ್ಮ ದೇಶದ ಪ್ರಧಾನಿ ಇಡೀ ವಿಶ್ವದಲ್ಲೇ ಬಲಾಢ್ಯ ಪ್ರಧಾನಿ ಅಂತ ಚರ್ಚೆಯಾಗುತ್ತಿದೆ. ಇವತ್ತು ಬಲಾಢ್ಯತೆ ಹೊಂದುವುದು ಬೇರೆ. ಶಾಂತಿಯುತವಾಗಿ ಅಕ್ಕಪಕ್ಕದ ದೇಶಗಳ ಜೊತೆ ವಿಶ್ವಾಸ ಮೂಡಿಸಿಕೊಂಡು ಕೆಲಸ ಮಾಡಬೇಕು. ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲು ಸಾಧ್ಯವಿಲ್ಲ. ನಮ್ಮ ದೇಶದ ಸೈನಿಕರು ಎಲ್ಲ ರೀತಿಯಲ್ಲಿ ಸಮರ್ಥರಿದ್ದಾರೆ. ನಮ್ಮ ದೇಶದ ಸೈನಿಕರ ಸಾಹಸ ಬೇರೆ ದೇಶಗಳ ಸೈನಿಕರಿಗೆ ಏನು ಕಡಿಮೆಯಿಲ್ಲ. ನಮ್ಮ ದೇಶದ ರಕ್ಷಣಾ ವ್ಯವಸ್ಥೆಯನ್ನ ಚೀನಾ ಹುಡುಗಾಟಿಕೆ ಅಂತ ಪರಿಗಣಿಸೋದು ಬೇಡ ಎಂದು ಕುಮಾರಸ್ವಾಮಿ ಹೇಳಿದರು.

Tags: bangloreH D KUMARASWAMYINDIAN ARMYPrime Minister Narendra Modi
ShareTweetSendShare
Join us on:

Related Posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

by Shwetha
May 12, 2026
0

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ದೇಶದ ಜನತೆಗೆ ಕೆಲವು ಮಹತ್ವದ ಮನವಿಗಳನ್ನು ಮಾಡಿದ್ದಾರೆ. ಚಿನ್ನ ಖರೀದಿಸಬೇಡಿ, ವಾಹನ ಬಳಕೆ ತಗ್ಗಿಸಿ, ವಿದೇಶಿ ಪ್ರವಾಸ ಬೇಡ ಎಂಬಂತಹ ಸಲಹೆಗಳ...

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

by Shwetha
May 12, 2026
0

ರಾಜ್ಯದ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರಿಗೆ ಸರ್ಕಾರದಿಂದ ದೊಡ್ಡ ಮಟ್ಟದ ಗುಡ್ ನ್ಯೂಸ್ ಸಿಕ್ಕಿದೆ. ದುಬಾರಿ ಜೀವನ ವೆಚ್ಚದ ನಡುವೆ ಸರ್ಕಾರ ಈಗ ತುಟ್ಟಿಭತ್ಯೆ (DA)...

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

by Shwetha
May 12, 2026
0

ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಬಿಜೆಪಿ...

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

by Shwetha
May 12, 2026
0

ವಿಶ್ವ ಸಿನಿರಂಗದಲ್ಲೇ ಸದ್ದು ಮಾಡಿದ್ದ RRR ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ ರಾಮ್ ಚರಣ್ ಇದೀಗ ಮತ್ತೊಂದು ಭಾರಿ ನಿರೀಕ್ಷೆಯ ಸಿನಿಮಾದೊಂದಿಗೆ ಅಭಿಮಾನಿಗಳ ಮುಂದೆ...

ಡಿ. ಸುಧಾಕರ್ ಗೆ ಅಂತಿಮ ವಿದಾಯ

ಡಿ. ಸುಧಾಕರ್ ಗೆ ಅಂತಿಮ ವಿದಾಯ

by Shwetha
May 12, 2026
0

ರಾಜ್ಯದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಿ. ಸುಧಾಕರ್ ಅವರು ತಮ್ಮ 66 ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಶ್ವಾಸಕೋಶದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram