ಮೈಸೂರು: ಕಾನೂನು ಹೋರಾಟದ ವಿಚಾರವನ್ನು ನಮ್ಮ ಕಾನೂನಿನ ತಂಡ ನೋಡಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಹೋರಾಟದ ವಿಚಾರವನ್ನ ನಮ್ಮ ಕಾನೂನಿನ ತಂಡ ನೋಡಿಕೊಳ್ಳುತ್ತದೆ. ಕಾನೂನು ಸಲಹೆಗಾರ ಪೊನಣ್ಣ ನನ್ನನ್ನು ಭೇಟಿಯಾಗಿ ಮಾತನಾಡಿದ್ದಾರೆ. ಆದರೆ, ನಾನು ಅವರ ಬಳಿ ಯಾವ ಚರ್ಚೆಗಳನ್ನು ಮಾಡಿಲ್ಲ. ಅವರು ತಮ್ಮ ಕ್ಷೇತ್ರಕ್ಕೆ ಹೋಗುತ್ತಿದ್ದರು. ಸೌಜನ್ಯಕ್ಕೆ ಅವರು ಬಂದಿದ್ದರು ಎಂದು ಹೇಳಿದ್ದಾರೆ.
ಕುಮಾರಸ್ವಾಮಿಯ (HD Kumaraswamy)ಯ ಆರೋಪಗಳಿಗೆ ನಾನು ಉತ್ತರ ಕೊಡುವುದಿಲ್ಲ. ಕೊಡಬೇಕು ಅಂತ ಎಲ್ಲಿಯೂ ಇಲ್ಲ. ಉತ್ತರ ಕೊಡಲ್ಲ ಎಂದ ಮೇಲೆ ನಾನು ಕೊಡುವುದಿಲ್ಲ ಎಂದಿದ್ದಾರೆ.