ಸೋಲು-ಗೆಲುವು ಸಮನಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು : ಸಿಎಂ
ಬೆಂಗಳೂರು : ಹಾನಗಲ್ – ಸಿಂದಗಿ ಉಪಚುನಾವಣೆ ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು ಎಂದಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಸೋಲು-ಗೆಲುವನ್ನ ಸಮನಾಗಿ ಸ್ವಿಕರಿಸುವ ದೃಷ್ಠಿಕೋನ ನಮ್ಮದು.
ಸಿಂದಗಿಯಲ್ಲಿ ಗೆಲುವಿಗೆ ಶ್ರಮಿಸಿದ ಪಕ್ಷದ ನಾಯಕರಿಗೆ ಹಾಗೂ ಮತಹಾಕಿದ ಮಹಾಜನತೆಗೆ ಅಭಿನಂದನೆ ಎಂದರು.
ಇನ್ನು ಹಾನಗಲ್ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಿ, ಸೋಲಿನ ಕುರಿತು ನಾವು ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದ್ದೇವೆ.
ಈ ಅಂತರವನ್ನು ನಾವು ಸಾಧಿಸಬಹುದಾಗಿತ್ತು. ಕಾರಣಗಳನ್ನು ವಿಶ್ಲೇಷಿಸಿ, ಅವುಗಳನ್ನು ಸರಿಪಡಿಸಿ ಮುಂದೆ ಹೋಗುವ ಕೆಲಸವನ್ನು ಮಾಡುತ್ತೇವೆ ಎಂದು ತಿಳಿಸಿದರು.









