ಬೆಂಗಳೂರು : 2018ರಲ್ಲಿ ಕೊಡಗಿನಲ್ಲಿ ಉಂಟಾದ ಪ್ರವಾಹ ಅಲ್ಲಿನ ಜನರ ಬದುಕನ್ನ ಕಿತ್ತುಕೊಂಡಿತ್ತು. ಜನರು ಸೂರುಗಳನ್ನು ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದ್ದರು. ಆ ಸಂದರ್ಭದಲ್ಲಿ ಸೂರು ಕಳೆದುಕೊಂಡವರಿಗೆ ಮನೆಗಳನ್ನು ನಿರ್ಮಾಣ ಮಾಡಿಕೊಡುವುದಾಗಿ ಅಂದಿನ ಮೈತ್ರಿ ಸರ್ಕಾರ ಭರವಸೆ ನೀಡಿತ್ತು. ಆ ಭರವಸೆ ಇದೀಗ ನೆರವೇರಿದ್ದು, ಸಂತ್ರಸ್ತರಿಗೆ ಮದೆ ಹಾಗೂ ಜಂಬೂರಿನಲ್ಲಿ 463 ಮನೆಗಳನ್ನು ನಿರ್ಮಾಣ ಮಾಡಿಕೊಳಲಾಗಿದೆ. ಈ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ
ಹೆಚ್ ಡಿಕೆ ತಮ್ಮ ಟ್ವೀಟ್ ನಲ್ಲಿ.. “ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ನಾನು ಸಿಎಂ ಆಗಿದ್ದಾಗ ಚಾಲನೆ ನೀಡಿ, ಹಣ ಒದಗಿಸಿದ್ದೆ. ಇಂದು 463 ಮನೆಗಳು ಪೂರ್ಣವಾಗಿದ್ದು ಸಂತ್ರಸ್ತರಿಗೆ ಸೂರು ಸಿಗುತ್ತಿದೆ. ಅಂದು ಸಂತ್ರಸ್ತರ ನೋವನ್ನು ಸ್ವತಃ ನಾನೂ ಉಂಡಿದ್ದೆ. ಇಂದಿನ ಅವರ ಖುಷಿ ನನ್ನದೂ ಕೂಡ. ನಮ್ಮ ಕೆಲಸಗಳು ಮಾತಾಡಬೇಕು. ಮಾತಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಬರೆದುಕೊಂಡಿದ್ದಾರೆ.








