ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದಿಂದ ಸುದ್ದಿಗೋಷ್ಠಿ ನಡೆಯಿತು.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ ಮಾತನಾಡಿ, ಬಿಬಿಎಂಪಿಯಿಂದ ಸುಮಾರು 26 ತಿಂಗಳಿನಿಂದ ಬಿಲ್ ಬಾಕಿ ಉಳಿಸಿಕೊಳ್ಳಲಾಗಿದೆ. ಹೀಗಾಗಿ ನಾವು ಕಚೇರಿಯಿಂದ ಕಚೇರಿಗೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ತುಷಾರ್ ಗಿರಿನಾಥ್ ಅವರು ಬಿಬಿಎಂಪಿ ಮುಖ್ಯ ಆಯುಕ್ತರಾದನಂತರ ಈ ಸಮಸ್ಯೆ ಉಂಟಾಗಿದೆ. ಪಾಲಿಕೆಯಲ್ಲಿ ಹಣ ಇದ್ದರೂ ಕೂಡ ನಮ್ಮ ಬಿಲ್ ಪಾವತಿ ಮಾಡುತ್ತಿಲ್ಲ. ಗುತ್ತಿಗೆದಾರರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಇದೀಗ ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ಒಂದೊಂದು ಅಧಿಕಾರಿ ಒಂದೊಂದು ಉತ್ತರ ಕೊಡುತ್ತಿದ್ದಾರೆ. ಮುಖ್ಯಮಂತ್ರಿ, ಡಿಸಿಎಂ ಭೇಟಿ ಮಾಡಿದ್ದೇವೆ. ಬಿಲ್ ಪಾವತಿಗೆ ಸಿಎಂ ಆದೇಶ ಮಾಡಿದ್ದಾರೆ. ಸಿಎಂ ಆದೇಶ ಇದ್ದರೂ ಬಿಲ್ ಪಾವತಿ ಮಾಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ.
ಬಿಲ್ ಪಾವತಿ ಸಂದರ್ಭದಲ್ಲಿ ತನಿಖೆ ಎಂದು ಹೇಳ್ತಿದ್ದಾರೆ. ಹೀಗಾಗಿ ಗುತ್ತಿಗೆದಾರರು ಆತ್ಮಹತ್ಯೆ ಮಾಡ್ಕೊಳ್ತಿದ್ದಾರೆ. ತುಷಾರ್ ಗಿರಿನಾಥ್ ಅವರೇ ಬಿಬಿಎಂಪಿ ಗುತ್ತಿಗೆ ದಾರರು ಆತ್ಮಹತ್ಯೆ ಮಾಡ್ಕೋಳ್ಳಬೇಕಾ? ಎಂದು ಪ್ರಶ್ನಿಸಿದ್ದಾರೆ.








