ನವದೆಹಲಿ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಇತ್ತೀಚೆಗೆ ಮೋಹನ್ ಭಾಗವತ್ ಅವರು, ಮಂದಿರ-ಮಸೀದಿ (Mandir-Masjid) ವಿಚಾರದಲ್ಲಿ ದಿನಕ್ಕೊಂದು ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದಿದ್ದರು. ಇದಕ್ಕೆ ಅಖಿಲ ಭಾರತೀಯ ಸಂತ ಸಮಿತಿ ಆಕ್ರೋಶ ಹೊರಹಾಕಿದೆ
ಹಿಂದೂಗಳ ಧಾರ್ಮಿಕ ನಂಬಿಕೆಗಳ ವಿಚಾರದಲ್ಲಿ ನಿರ್ಣಯ ಕೈಗೊಳ್ಳಬೇಕಿರುವುದು ಧಾರ್ಮಿಕ ಮುಖಂಡರೇ ಹೊರತು, ಸಾಂಸ್ಕೃತಿಕ ಸಂಘಟನೆ ಆರೆಸ್ಸೆಸ್ ಅಲ್ಲ. ಧಾರ್ಮಿಕ ಗುರುಗಳ ನಿರ್ಧಾರಗಳನ್ನು ಸಂಘಪರಿವಾರ ಮತ್ತು ವಿಹೆಚ್ಪಿ ಒಪ್ಪಬೇಕು ಎಂದು ಎಕೆಎಸ್ಎಸ್ ಪ್ರಧಾನ ಕಾರ್ಯದರ್ಶಿ ಸ್ವಾಮಿ ಜಿತೇಂದ್ರನಂದ ಸರಸ್ವತಿ ಹೇಳಿದ್ದಾರೆ.
ಜ್ಯೋತಿರ್ಮಠದ ಅವಿಮುಕ್ತೇಶ್ವರನಂದ ಶಂಕರಾಚಾರ್ಯರು ಸಹ ಭಾಗವತ್ ಧೋರಣೆ ಖಂಡಿಸಿದ್ದಾರೆ.
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2025
HAL Recruitment 2025 : ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆ :...