ಕೋಲಾರ: ಮಾರುಕಟ್ಟೆಯಲ್ಲಿ ಚೆಂಡು ಹೂವಿನ ಬೆಲೆ ಇಳಿಕೆಯಾಗಿದ್ದರಿಂದಾಗಿ ರೈತರು ರಸ್ತೆಗೆ ಸುರಿದು ಬೇಸರ ವ್ಯಕ್ತಪಡಿಸಿದ್ದಾರೆ.
ಕೋಲಾರದಲ್ಲಿ (Kolar) ಈ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarpet) ತಾಲೂಕಿನ ನೆರ್ನಹಳ್ಳಿಯ ನಾರಾಯಣಪ್ಪ ಎಂಬ ರೈತ ದೇವರ ಪಾದದ ಹತ್ತಿರ ಹೂವನ್ನು ರಸ್ತೆಯಲ್ಲಿ ಸುರಿದು ಬೇಸರ ವ್ಯಕ್ತಪಡಿಸಿದ್ದಾರೆ.
ವ್ಯಾಪಾರಿಗಳು ಕೆಜಿಗೆ 10 ರೂ.ನಂತೆ ಕೇಳುತ್ತಿದ್ದಾರೆ. ಇದರಿಂದಾಗಿ ತೀವ್ರ ನಷ್ಟ ಉಂಟಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಾರಾಯಣಪ್ಪ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಎಕರೆಗೆ 50 ಸಾವಿರದಂತೆ ಖರ್ಚು ಮಾಡಿ ಚೆಂಡು ಹೂವು ಬೆಳೆದಿದ್ದರು. ಆದರೆ ಚೆಂಡು ಹೂವು ಬೆಲೆ ಕುಸಿತ ಕಂಡ ಹಿನ್ನೆಲೆ ಕೋಲಾರ ಮುಖ್ಯರಸ್ತೆ ಬದಿಯಲ್ಲಿ ಸುರಿದು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.