ರಾಹುಲ್ ಗಾಂಧಿ ಅವರ ವಿರುದ್ಧ 1,000 ಕ್ಕೂ ಹೆಚ್ಚು ದೂರು ದಾಖಲು Saaksha Tv
ಆಸ್ಸಾಂ: ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 1,000 ಕ್ಕೂ ಹೆಚ್ಚು ದೂರುಗಳನ್ನು ಬಿಜೆಪಿ ಕಾರ್ಯಕರ್ತರು ದಾಖಲಿಸಿದ್ದಾರೆ.
ಸಂಸದ ರಾಹುಲ್ ಗಾಂಧಿ ಮಾಡಿರುವ ಒಂದು ವಿವಾದಾತ್ಮಕ ಟ್ವೀಟ್ ಮಾಡಿದ್ದು, ಈ ಸಂಬಂಧ ಬಿಜೆಪಿ ಯುವ ಮೋರ್ಚಾ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಸ್ಸಾಂ ಬಿಜೆಪಿ ಯುವ ಮೋರ್ಚಾದ ಮಾಧ್ಯಮ ಸಂಚಾಲಕ ಬಿಸ್ವಜಿತ್ ಖೌಂಡ್ ಅವರು ರಾಹುಲ್ ಗಾಂಧಿ ಕೆಳದಿನಗಳ ಹಿಂದೆ ಮಾಡಿರುವ ಟ್ವೀಟ್ ಆಕ್ಷೇಪರ್ಹವಾಗಿದೆ. ಹಾಗಾಗಿ ರಾಹುಲ್ ಗಾಂಧಿ ವಿರುದ್ಧ ಯುವ ಮೋರ್ಚಾದ ಕಾರ್ಯಕರ್ತರು 1,000 ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿದ್ದಾರೆ. ಅರುಣಾಚಲ ಪ್ರದೇಶವು ತನ್ನ ಭಾಗವಾಗಿದೆ ಎಂಬ ಚೀನಾದ ಹೇಳಿಕೆಯನ್ನು ರಾಹುಲ್ ಗಾಂಧಿ ಅವರ ಟ್ವೀಟ್ ಒಂದು ಪರೋಕ್ಷವಾಗಿ ಬೆಂಬಲಿಸುತ್ತದೆ ಎಂದು ಆರೋಪಿಸಿದ್ದಾರೆ
ಅಲ್ಲದೇ ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಿದ್ದೇವೆ. ರಾಹುಲ್ ಗಾಂಧಿ ಅವರ ಟ್ವೀಟ್ ಪ್ರತ್ಯೇಕತಾವಾದಿ ಮನಸ್ಥಿತಿಯನ್ನು ವ್ಯಕ್ತಪಡಿಸಿದೆ. ಇದು ಹಳೆಯ ಪಕ್ಷದ ಸಿದ್ಧಾಂತವನ್ನು ಮತ್ತೆ ತೋರಿಸಿದಂತಿದೆ. ಕಾಂಗ್ರೆಸ್ ಪಕ್ಷವು ಭಾರತಕ್ಕೆ ಅಪಾಯ. ರಾಹುಲ್ ಗಾಂಧಿ ಅವರು ಭಾರತದ ದೊಡ್ಡ ಸಮಸ್ಯೆ ಎಂದು ಹೇಳಿದ್ದಾರೆ.
ಕಳೆದ ವಾರ ರಾಹುಲ್ ಗಾಂಧಿ ನಮ್ಮ ಸಂಸ್ಕೃತಿ, ವೈವಿಧ್ಯತೆ, ಭಾಷೆ, ಜನ, ರಾಜ್ಯಗಳ ನಡುವೆ ಒಂದು ಸಂಬಂಧವಿದೆ. ಅದು ನಮ್ಮ ಹೆಮ್ಮೆ. ಕಾಶ್ಮೀರದಿಂದ ಕೇರಳದವರೆಗೆ ಮತ್ತು ಗುಜರಾತ್‍ನಿಂದ ಪಶ್ಚಿಮ ಬಂಗಾಳದ ವರೆಗೆ ಭಾರತದ ವೈವಿಧ್ಯತೆ ಹರಡಿದೆ ಎಂದು ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ್ದರು. ಇದೀಗ ಈ ಟ್ವೀಟ್‍ನಲ್ಲಿ ಈಶಾನ್ಯ ಭಾಗದ ರಾಜ್ಯಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಅಸ್ಸಾಂನ ಬಿಜೆಪಿ ಯುವ ಮೋರ್ಚಾ ದೂರು ದಾಖಲಿಸಿದೆ.