ದೇಶದಲ್ಲಿ ಹೊಸದಾಗಿ 1,27 ಲಕ್ಷ ಕೊರೊನಾ ಪ್ರಕರಣಗಳು ಪತ್ತೆ Saaksha Tv
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,27,952 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟ್ವೀಟ್ ಮಾಡಿದೆ.
ಕೊರೊನಾ ದಿನದ ಏರಿಕೆ ಪ್ರಮಾಣವು 7.98ರಷ್ಟಿದ್ದು, ವಾರದ ಏರಿಕೆ ಪ್ರಮಾಣವು ಶೇ 11.21 ರಷ್ಟಿದೆ. ಇನ್ನೂ ಕಳೆದ 24 ಗಂಟೆಯಲ್ಲಿ 2,30,814 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣವು ಶೇ 95.64 ರಷ್ಟಿದೆ. ಸಕ್ರಿಯ ಪ್ರಕರಣಗಳು 13,31,648 ಲಕ್ಷ ಇದ್ದು, ಇದರ ಪ್ರಮಾಣವು ಶೇ 3.16 ರಷ್ಟಿದೆ. ಕಳೆದ 24 ಗಂಟೆಯಲ್ಲಿ 1059 ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಅಲ್ಲದೇ ಕಳೆದ 24 ಗಂಟೆಯಲ್ಲಿ 16,03,856 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಇಲ್ಲಿಯವರೆಗೆ 168.98 ಕೋಟಿ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.