ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,67 ಲಕ್ಷ ಕೊರೊನಾ ಪ್ರಕರಣಗಳು ಪತ್ತೆ Saaksha Tv
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,67,059 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ.
ದಿನದ ಏರಿಕೆ ಪ್ರಮಾಣವು 11.69 ರಷ್ಟಿದ್ದು, ವಾರದ ಏರಿಕೆ ಪ್ರಮಾಣವು 15.25ರಷ್ಟಿದೆ. ಸಕ್ರೀಯ ಪ್ರಕರಣಗಳು 17,43,059 ಲಕ್ಷ ಇದ್ದು, ಸಕ್ರೀಯ ಪ್ರಕರಣಗಳ ಪ್ರಮಾಣವು 4.20 ರಷ್ಟಿದೆ. ಕಳೆದ 24 ಗಂಟೆಯಲ್ಲಿ ಚೇತರಿಸಿಕೊಂಡವರು 2,54,076 ಲಕ್ಷ ಜನರು. ಚೇತರಿಕೆ ಪ್ರಮಾಣವು 94.60 ರಷ್ಟಿದೆ. ಕಳೆದ 24 ಗಂಟೆಯಲ್ಲಿ 1,192 ಜನ ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಇನ್ನೂ ಕಳೆದ 24 ಗಂಟೆಯಲ್ಲಿ 14,28,672 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಮತ್ತು 1.66 ಕೋಟಿ ಕೊರೊನಾ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಸಿದೆ.









