ಕಲಬುರಗಿ: ಕಲುಷಿತ ನೀರು (Contaminated Water) ಸೇವಿಸಿ 30ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಈ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ನಿಂಬರ್ಗಾ (Nimbarga) ಗ್ರಾಮದಲ್ಲಿ ನಡೆದಿದೆ.
ನಿಂಬರ್ಗಾ ಗ್ರಾಮದ ಬೋವಿ ಬಡಾವಣೆಯಲ್ಲಿ ಓವರ್ ಹೆಡ್ ಟ್ಯಾಂಕ್ ನಿಂದ ಸರಬರಾಜು ಆಗಿರುವ ನೀರು ಕುಡಿದು ಬೋವಿ ಬಡಾವಣೆಯ ಜನರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಹಲವು ತಿಂಗಳಿನಿಂದ ಓವರ್ ಹೆಡ್ ಟ್ಯಾಂಕ್ ಸ್ವಚ್ಛಗೊಳಿಸದೆ ನೀರು ಸರಬರಾಜು ಮಾಡಲಾಗುತ್ತಿತ್ತು. ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.