ಮೊದಲ ದಿನ 40 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ Saaksha Tv
ನವದೆಹಲಿ: ಸೋಮವಾರ ದೇಶದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಮೊದಲ ಡೋಸ್ ಲಸಿಕೆ ನೀಡಲು ಪ್ರಾರಂಭಿಸಲಾಗಿತ್ತು. ನಿನ್ನೆ ಮೊದಲ ದಿನದಂದು 40 ಲಕ್ಷಕ್ಕೂ ಅಧಿಕ ಮಕ್ಕಳು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಎಂದು ಕೋವಿನ್ ಪೋರ್ಟಲ್ನಲ್ಲಿ ವರದಿಯಾಗಿದೆ.
ಮೊದಲ ದಿನ 39.88 ಲಕ್ಷ ಮಕ್ಕಳು ಸೋಮವಾರ ಮಧ್ಯಾಹ್ನದವರೆಗೆ ಕೋವಿನ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ತೀವ್ರವಾಗಿ ಹರಡುತ್ತಿರುವ ಕೋವಿಡ್ ರೂಪಾಂತರಿ ಓಮಿಕ್ರಾನ್ ಭೀತಿಯಿಂದಾಗಿ 15 ರಿಂದ 18 ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆಗಳನ್ನು ನೀಡುವ ಪ್ರಕ್ರಿಯೆ ಆರಂಭಿಸಲಾಗಿತ್ತು. ಕರ್ನಾಟಕದಲ್ಲಿ ಮೊದಲ ದಿನ 4 ಲಕ್ಷಕ್ಕೂ ಅದಿಕ ಮಕ್ಕಳು ಲಸಿಕೆಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಮೊದಲ ದಿನ 6.3 ಲಕ್ಷ ಮಕ್ಕಳಿಗೆ ಲಸಿಕೆಯನ್ನು ನೀಡುವ ಗುರಿ ಹೊಂದಿದ್ದು, ಇದರಲ್ಲಿ ಶೇ.65 ರಷ್ಟು ಮಕ್ಕಳು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.