ಶೇ 86 ರಷ್ಟು ವಯಸ್ಕ ಜನಸಂಖ್ಯೆ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದೆ
ನವದೆಹಲಿ: ದೇಶದಲ್ಲಿ ಕೊರೊನಾ ವಿರುದ್ಧ ಹೊರಾಡಲು ಲಸಿಕೆ ಅಭಿಯಾನವನ್ನು ಪ್ರಾರಂಭಿಸಿದ್ದು, ಈಗ ದೇಶ 86% ರಷ್ಟು ಸಂಪೂರ್ಣವಾಗಿ ಲಸಿಕೆ ನೀಡುವ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.
ಭಾರತವು ಮಂಗಳವಾರ ತನ್ನ ಬೃಹತ್ ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು ವಯಸ್ಕ ಜನಸಂಖ್ಯೆಯ 86% ರಷ್ಟು ಸಂಪೂರ್ಣವಾಗಿ ಲಸಿಕೆ ನೀಡುವ ಮೂಲಕ ಸಾಧನೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾರತದಲ್ಲಿ ಒಟ್ಟು ವಯಸ್ಕ ಜನಸಂಖ್ಯೆಯ 86% ಕ್ಕಿಂತ ಹೆಚ್ಚು ಜನರು ಕೋವಿಡ್-19 ಲಸಿಕೆಗಳ ಎರಡೂ ಡೋಸ್ಗಳೊಂದಿಗೆ ಸಂಪೂರ್ಣವಾಗಿ ಲಸಿಕೆ ಹಾಕಿದ್ದಾರೆ ಎಂದಿದ್ದಾರೆ.
Way to go!
Over 86% of the adult population is now fully vaccinated.
Together, let's defeat #COVID19.
चरैवेति चरैवेति! pic.twitter.com/4ajcEok33Q
— Dr Mansukh Mandaviya (@mansukhmandviya) April 26, 2022
ಮಂಗಳವಾರ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) 6 ರಿಂದ 12 ವರ್ಷ ವಯಸ್ಸಿನ ಮಕ್ಕಳಲ್ಲಿ ತುರ್ತು ಬಳಕೆಗಾಗಿ ಭಾರತ್ ಬಯೋಟೆಕ್ನ ಕೋವಾಕ್ಸಿನ್ ಅನ್ನು ಅನುಮೋದಿಸಿದೆ. ಇದು ದೇಶದ ಕೊರೊನಾ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಸಾಧನೆಯಾಗಿದೆ.