Rajasthan: ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಅರ್ಧದಷ್ಟು ಸುಳ್ಳು – ಅಶೋಕ್ ಗೆಹ್ಲೋಟ್
ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ರಾಜಸ್ಥಾನ ಮೊದಲ ಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗೆಡೆ ಮಾಡಿದ ವರದಿಯಲ್ಲಿ ಪ್ರಕಟವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಾತನಾಡಿ ಇದರಲ್ಲಿ ಅರ್ಧಕ್ಕಿಂತ ಹೆಚ್ಚು, ಸುಳ್ಳು ಪ್ರಕರಣಗಳಿವೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ 2020 ಮತ್ತು 2021 ರ ಅವಧಿಯಲ್ಲಿ ದೇಶದಾದ್ಯಂತ ಹೆಚ್ಚಿನ ಅತ್ಯಾಚಾರ ಪ್ರಕರಣಗಳು ರಾಜಸ್ಥಾನದಿಂದ ವರದಿಯಾಗಿವೆ ಎಂದು ಅಂಕಿ ಅಂಶಗಳು ತಿಳಿಸಿವೆ.
ಜೈಪುರದ ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಘಟಿಕೋತ್ಸವ ಪರೇಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಜಾರಿಗೆ ತಂದಿರುವ ಕಡ್ಡಾಯ ಎಫ್‌ಐಆರ್ ವ್ಯವಸ್ಥೆಯೇ ಪ್ರಕರಣಗಳ ಹೆಚ್ಚಳಕ್ಕೆ ಕಾರಣ. ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ಪ್ರಕರಣಗಳಲ್ಲಿ ಸುಮಾರು 56 ಪ್ರತಿಶತದಷ್ಟು ಅಪರಾಧಗಳಲ್ಲಿ ಸುಳ್ಳು ಪ್ರಕರಣಗಳನ್ನ ದಾಖಲಿಸಲಾಗಿದೆ ಎಂದು ಹೇಳಿದರು.
“ಅತ್ಯಾಚಾರ ಎಸಗುವವರು ಯಾರು? ಹೆಚ್ಚಿನ ಪ್ರಕರಣಗಳಲ್ಲಿ ಸಂತ್ರಸ್ತೆಯ ಪರಿಚಿತರು, ಸಂಬಂಧಿಕರು ಸೇರಿದಂತೆ ಅಪರಾಧ ಎಸಗುತ್ತಾರೆ. ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಶೇ.56 ರಷ್ಟು ಸುಳ್ಳು ಪ್ರಕರಣಗಳು ನಕಲಿಯಾಗಿವೆ. ಈ ನಿಟ್ಟಿನಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ” ಎಂದು ಸಿಎಂ ಹೇಳಿದರು. ಗೆಹ್ಲೋಟ್ ಹೇಳಿದರು.
ರಾಜಸ್ಥಾನದಲ್ಲಿ 2020 ಮತ್ತು 2021 ರಲ್ಲಿ ಕ್ರಮವಾಗಿ 5,310 ಮತ್ತು 6,337 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ.








